ಮಂಡ್ಯ: ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದ ಭ್ರೂಣ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12 ಜನರನ್ನು ಬಂಧಿಸಿದ್ದಾರೆ.
ತನಿಖೆ ಕೈಗೊಂಡಿದ್ದ ಪೊಲೀಸರು ಕೊನೆಗೂ ಪ್ರಕರಣದ ಕಿಂಗ್ ಪಿನ್ ನನ್ನು ಬಂಧಿಸಿದ್ದಾರೆ. ಸಿಐಡಿಗೂ ಚಳ್ಳೆಹಣ್ಣು ತಿನ್ನಿಸಿ ದಂಧೆ ವಿಸ್ತರಿಸಿದ್ದ ಆರೋಪಿ ಅಭಿಷೇಕ್ ಬಂಧಿಯಾಗಿದ್ದು, ಆತನೊಂದಿಗೆ ವಿರೇಶ್ ಸೇರಿದಂತೆ ಇಲ್ಲಿಯವರೆಗೆ ಒಟ್ಟು 12 ಜನರನ್ನು ಬಂಧಿಸಲಾಗಿದೆ.
ಪ್ರಕರಣದಲ್ಲಿ ವಿರೇಶ್ ಜೈಲು ಸೇರಿ ಬೇಲ್ ಮೇಲೆ ಹೊರ ಬಂದಿದ್ದಾನೆ. ಬಂಧಿತರಿಂದ 2 ಸ್ಕ್ಯಾನಿಂಗ್ ಮಷಿನ್, 3 ಕಾರು, ಮೊಬೈಲ್ ಸೇರಿ 23 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತ ಆರೋಪಿ ಅಭಿಷೇಕ್ನ ನೆಟ್‌ವರ್ಕ್ ಮತ್ತು ತಂತ್ರಗಾರಿಗೆ ಕಂಡು ಪೊಲೀಸರೇ ಶಾಕ್ ಆಗಿದ್ದಾರೆ. ಇದರ ಮೂಲಕ ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ಹೇಯ ಕೃತ್ಯ ನಡೆಸುತ್ತಿದ್ದ. ಪೊಲೀಸರಿಗೆ ಯಾಮಾರಿಸಲು ಮೊಬೈಲ್ ಬದಲು ಇಂಟರ್ನೆಟ್ ಕಾಲ್ ಬಳಸುತ್ತಿದ್ದ. ಆಲೆಮನೆ ಕೇಸ್‌ನಲ್ಲಿ ಸಿಐಡಿ ಕೈಗೂ ಸಿಗದೆ ದಂಧೆ ವಿಸ್ತರಣೆ ಮಾಡಿದ್ದ ಎನ್ನಲಾಗಿದೆ.
ಆಲೆಮನೆ ಪ್ರಕರಣವನ್ನೇ ಬಳಸಿಕೊಂಡು ಡಿಮ್ಯಾಂಡ್ ಕ್ರಿಯೇಟ್ ಮಾಡಿದ್ದ. ಒಂದು ಹೆಣ್ಣು ಭ್ರೂಣಹತ್ಯೆಗೆ 25 ಸಾವಿರದಿಂದ 1 ಲಕ್ಷ ರೂ.ವರೆಗೆ ಹಣ ಪಡೆಯುತ್ತಿದ. ಸದ್ಯ ತನಿಖೆ ವೇಳೆ 5 ಕೇಸ್‌ನಲ್ಲಿ ಅಭಿಷೇಕ್ ಕಿಂಗ್‌ಪಿನ್ ಆಗಿದ್ದಾನೆಎನ್ನಲಾಗಿದೆ.