ಬೆಂಗಳೂರು: ಫುಡ್ ಡೆಲಿವರಿ ಬಾಯ್ ಒಬ್ಬಾತ ಸಾರಿಗೆ ಬಸ್ ಗೆ ಬಲಿಯಾಗಿರುವ ಘಟನೆ ನಡೆದಿದೆ.
ಸಾರಿಗೆ ಬಸ್ ಚಾಲಕನ ನಿರ್ಲಕ್ಷ್ಯ ಹಾಗೂ ಅತೀ ವೇಗದ ಚಾಲನೆಯಿಂದಾಗಿ ಫುಡ್ ಡೆಲಿವರಿ ಬಾಯ್ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಬಸವರಾಜು ಸಾವನ್ನಪ್ಪಿದ ದುರ್ದೈವಿ. ನಗರದ ಸ್ಯಾಟಲೈಟ್ ಬಸ್ ನಿಲ್ದಾಣದ ಮುಂದೆ ಈ ಅಪಘಾತ ಸಂಭವಿಸಿದ್ದು, ಬಸವರಾಜು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಬಸವರಾಜು ಮೈಸೂರು ರಸ್ತೆ ಮಾರ್ಗವಾಗಿ ಫುಡ್ ಡೆಲಿವರಿ ಮಾಡಲು ತೆರಳುತ್ತಿದ್ದರು. ಈ ಸಂದರ್ಭದಲ್ಲಿ ವೇಗದಿಂದ ಬಂದ ಕೆಎಸ್ ಆರ್ ಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಆಗ ಬಸವರಾಜು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬ್ಯಾಟರಾಯನಪುರ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.








