ಬಿಸಿಯೂಟ ಸೇವಿಸಿ ಮಕ್ಕಳು ಅಸ್ವಸ್ಥ : ಆಸ್ಪತ್ರೆಗೆ ದಾಖಲು
ಚಾಮರಾಜನಗರ : ಮಧ್ಯಾಹ್ನದ ಬಿಸಿಯೂಟ ಸೇವಿಸಿ 60 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಹನೂರು ತಾಲೂಕಿನ ವಡಕೆಹಳ್ಳ ಗ್ರಾಮದಲ್ಲಿ ನಡೆದಿದೆ.
ವಡಕೆಹಳ್ಳ ಗ್ರಾಮದ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಹಲ್ಲಿ ಬಿದ್ದ ಆಹಾರವನ್ನು ಸೇವಿಸಿದ ಮಕ್ಕಳಲ್ಲಿ ಕೆಲವರು ವಾಂತಿ ಮಾಡಿಕೊಳ್ಳಲು ಆರಂಭಿಸುತ್ತಿದ್ದಂತೆ ಮತ್ತಷ್ಟು ಮಕ್ಕಳು ಅಸ್ವಸ್ಥಗೊಂಡಿದ್ದಾರೆ.
ಮಕ್ಕಳು ಅಸ್ವಸ್ಥಗೊಳ್ಳುತ್ತಿದ್ದಂತೆ ಗಾಬರಿಯಾದ ಶಿಕ್ಷಕರು ಕೂಡಲೇ ಮಕ್ಕಳನ್ನು ವಡಕೆಹಳ್ಳ ಗ್ರಾಮದ ಸಮೀಪದ ಕೌದಳ್ಳಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದರಲ್ಲಿ ಕೆಲವು ಮಕ್ಕಳನ್ನು ರಾಮಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.