ಬೆಂಗಳೂರು: ಗಂಡನಿಂದ ವಿಚ್ಛೇದನ ಪಡೆಯಲು ಅರ್ಜಿ ಸಲ್ಲಿಸಿದ ಪತ್ನಿ (Wife) ಬೇರೆ ಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರೆ ಜೀವನಾಂಶ ಪಡೆಯಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.
ವಿಚ್ಛೇದಿತ ಪತಿಯಿಂದ ಜೀವನಾಂಶ ಕೋರಿ ಸಲ್ಲಿಕೆಯಾಗಿದ್ದ ಮಹಿಳೆಯೊಬ್ಬರ ಅರ್ಜಿಯನ್ನು ವಜಾಗೊಳಿಸಲಾಗಿದೆ. ಪತ್ನಿಗೆ ಜೀವನಾಂಶ ನೀಡುವಂತೆ ಪತಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ್ದ ಆದೇಶ ರದ್ದುಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ವಿಚಾರಣೆ ನಡೆಸಿ ಈ ರೀತಿ ಅಭಿಪ್ರಾಯಪಟ್ಟರು.
ಅರ್ಜಿದಾರರು ಅನೈತಿಕ ಸಂಬಂಧ ಹೊಂದಿರುವಾಗ ಜೀವನಾಂಶದ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ನ್ಯಾಯಮೂರ್ತಿ ಬಾದಾಮಿಕರ್ ಹೇಳಿದ್ದಾರೆ. ಕಾನೂನು ಬದ್ಧವಾಗಿ ಮದುವೆಯಾದ ಪತ್ನಿ ಮತ್ತು ಜೀವನಾಂಶಕ್ಕೆ ಅರ್ಹರು ಎಂಬ ಪತ್ನಿ ವಾದವನ್ನು ಅರ್ಜಿದಾರರ ನಡವಳಿಕೆ ಗಮನದಲ್ಲಿಟ್ಟುಕೊಂಡು ಸ್ವೀಕರಿಸಲಾಗುವುದಿಲ್ಲ. ಪ್ರಾಮಾಣಿಕರಲ್ಲ ಮತ್ತು ಅನೈತಿಕ ಸಂಬಂಧವನ್ನು ಹೊಂದಿದ್ದಾರೆ” ಎಂದು ನ್ಯಾಯಮೂರ್ತಿ ಬಾದಾಮಿಕರ್ ಅಭಿಪ್ರಾಯ ಪಟ್ಟಿದ್ದಾರೆ.