ಮುಂಬೈ: ಕಂಪನಿಯೊಂದು ಒಪ್ಪಂದ ಮುರಿದುಕೊಂಡಿದ್ದಕ್ಕೆ ಪಾಪಿಗಳು ಆ ಕಂಪನಿಯ ಸಮೋಸಾದೊಳಗೆ ಬ್ಯಾಂಡೇಜ್, ಕಾಂಡೋಮ್, ತಂಬಾಕು, ಕಲ್ಲು ತುಂಬಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
ಮಹಾರಾಷ್ಟ್ರದ ಪುಣೆಯಲ್ಲಿ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದ್ದು, ಐವರ ವಿರುದ್ಧ ಎಪ್ ಐಆರ್ ದಾಖಲಿಸಲಾಗಿದೆ. ರಹೀಮ್ ಶೇಖ್, ಅಜರ್ ಶೇಖ್, ಮಜರ್ ಶೇಖ್, ಅಜರ್ ಶೇಖ್ ಮತ್ತು ವಿಕ್ಕಿ ಶೇಖ್ ಆರೋಪಿಗಳು ಎನ್ನಲಾಗಿದೆ. ಒಪ್ಪಂದ ರದ್ದಾಗಿದ್ದ ಕೋಪದಲ್ಲಿ ಹೀಗೆ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ಕುರಿತು ಚಿಖಾಲಿ ಮೂಲದ ಕಂಪನಿಯೊಂದರ ಅಧಿಕಾರಿ ಕೀರ್ತಿಕುಮಾರ್ ಶಂಕರರಾವ್ ದೇಸಾಯಿ ಅವರು ಏ.7 ರಂದು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ಕಂಪನಿಯು ಚಿಖಾಲಿಯ ಕಂಪನಿಯೊಂದಿಗೆ ಕೀರ್ತಿಕುಮಾರ್ ಅವರು ರಹೀಮ್ ಖಾನ್ ಮಾಲೀಕತ್ವದ SRS ಎಂಟರ್ ಪ್ರೈಸಸ್ ಹೆಸರಿನ ಕಂಪನಿಯೊಂದಿಗೆ ಸಮೋಸಾ ಪೂರೈಕೆಗೆ ಒಪ್ಪಂದ ಮಾಡಿಕೊಂಡಿತ್ತು. ಆದರೆ, ಎಸ್ ಆರ್ ಎಸ್ ಕಂಪನಿಯಿಂದ ಸರಬರಾಜಾಗುತ್ತಿದ್ದ ಸಮೋಸದಲ್ಲಿ ಗಾಯಗಳಿಗೆ ಹಾಕುವ ಬ್ಯಾಂಡೇಜ್ ಪತ್ತೆಯಾಗಿದೆ. ಹೀಗಾಗಿ ಒಪ್ಪಂದ ರದ್ದು ಮಾಡಿಕೊಳ್ಳಲಾಗಿತ್ತು. ನಂತರ ಪುಣೆ ಮೂಲದ ಮತ್ತೊಂದು ಕಂಪನಿಯಾದ ಮನೋಹರ್ ಎಂಟರ್‌ಪ್ರೈಸಸ್‌ಗೆ ಸಮೋಸಾಗಳನ್ನು ಪೂರೈಸಲು ಸೂಚನೆ ನೀಡಿತು. ಇದರಿಂದ ಸಿಟ್ಟಿಗೆದ್ದ SRS ಮಾಲೀಕ ರಹೀಮ್ ಖಾನ್ ತನ್ನ ಸಹಚರರಾದ ಅಜರ್ ಶೇಖ್ ಮತ್ತು ಮಜರ್ ಶೇಖ್ ಜೊತೆ ಸೇರಿ ದೊಡ್ಡ ಸಂಚು ರೂಪಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ರಹೀಮ್ ಖಾನ್, ತನ್ನ ಕೆಲಸಗಾರರಿಗೆ ಕಾಂಡೋಮ್ ಗಳು, ಗುಟ್ಕಾ, ಕಲ್ಲುಗಳನ್ನು ಸಮೋಸಾಳ ಒಳಗೆ ತುಂಬಲು ಸೂಚಿಸಿದ್ದಾನೆ ಎಂದು ಕಂಪನಿ ತಿಳಿಸಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ.