ಚಿರತೆಯನ್ನು ಸೆರೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ
ಚಾಮರಾಜನಗರ : ಹೊನ್ನಳ್ಳಿ ಗ್ರಾಮದ ಸುತ್ತಲಿನ ಜಮೀನುಗಳಲ್ಲಿ ಹೆಣ್ಣು ಚಿರತೆಯೊಂದು ಕಾಣಿಸಿಕೊಂಡು ಗ್ರಾಮಸ್ಥರಿಗೆ ಮತ್ತು ರೈತರಿಗೆ ಭಯವುಂಟು ಮಾಡುತ್ತಿತ್ತು. ಈ ಚಿರತೆಯು ಒಂದುವರೆ ವರ್ಷದಾಗಿದ್ದು, ಸದ್ಯ ಅರಣ್ಯ ಇಲಾಖೆ ಸೆರೆ ಹಿಡದಿದ್ದಾರೆ.
ಆಗಾಗ ಗ್ರಾಮದ ಸುತ್ತಲಿನ ಜಮೀನುಗಳ್ಳಲ್ಲಿ ಕಾಣಿಸಿಕೊಳ್ಳುತ್ತಿದ್ದ, ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಅರಣ್ಯ ಇಲಾಖೆ ಸಿಬ್ಬಂದಿ ಗ್ರಾಮದಲ್ಲಿ ಬೋನ್ ಇರಸಿದ್ದರು. ಭಾನುವಾರ ರಾತ್ರಿ ಚಿರತೆಯು ಬೋನಿಗೆ ಬಿದ್ದಿದ್ದು, ಗ್ರಾಮಸ್ಥರು ಮತ್ತು ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಸೆರೆಯಾದ ಚಿರತೆಯನ್ನು ಬಿಆರ್ಟಿ ಹುಲಿ ಸಂರಕ್ಷಿತಾರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಕಳೆದ ಐದು ತಿಂಗಳಲ್ಲಿ ಚಾಮರಾಜನಗರ ತಾಲೂಕಿನ ವಿವಿಧೆಡೆ 7 ಚಿರತೆಗಳನ್ನು ಸೆರೆಹಿಡಿಯಲಾಗಿದೆ.








