ಆಂಧ್ರಪ್ರದೇಶದ ಮಾಜಿ ಸಿಎಂ ರೋಸಯ್ಯ ಇನ್ನಿಲ್ಲ Rosayya saaksha tv
ಹೈದರಾಬಾದ್ : ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕೊನಿಜೇಟಿ ರೋಸಯ್ಯ ನಿಧನರಾಗಿದ್ದಾರೆ.
ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯಕ್ಕೆ ತುತ್ತಾಗಿದ್ದ ರೋಸಯ್ಯ ಅವರು ಹೈದರಾಬಾದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಆದ್ರೆ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಕೊನಿಜೇಟಿ ರೋಸಯ್ಯ ಅವರ ಅಗಲಿಕೆಗೆ ದೇಶದ ರಾಜಕೀಯ ಗಣ್ಯರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ
ಇನ್ನು ರೋಸಯ್ಯ ಅವರು 2009 ರಿಂದ 2010 ರವರೆಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.
ಕರ್ನಾಟಕದಲ್ಲಿ ಎರಡು ತಿಂಗಳ ಕಾಲ ರಾಜ್ಯಪಾಲರಾಗಿದ್ದರು.