ಬಿಬಿಎಂಪಿ ಮಾಜಿ ಪಾಲಿಕೆ ಸದಸ್ಯೆ ರೇಖಾ ಕದಿರೇಶ್ ಹತ್ಯೆ
ಬೆಂಗಳೂರು: ಬಿಬಿಎಂಪಿ ಮಾಜಿ ಪಾಲಿಕೆ ಸದಸ್ಯೆ ರೇಖಾ ಕದಿರೇಶ್ ಅವರನ್ನು ಹತ್ಯೆ ಮಾಡಲಾಗಿದೆ. ಛಲವಾದಿಪಾಳ್ಯ ಕಾರ್ಪೋರೇಟ್ ಆಗಿದ್ದ ರೇಖಾ ಕದಿರೇಶ್ ಅವರನ್ನು ಸಹಚರರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ರೇಖಾ ಕದಿರೇಶ್ ಮನೆ ಮುಂದೆಯೇ ಇಂದು ಹಲ್ಲೆ ನಡೆದಿತ್ತು. ಮನೆಯ ಒಳಗಡೆ ಇದ್ದ ರೇಖಾ ಅವರನ್ನು ಹೊರಗೆ ಕರೆದು ಮಾರಕ ಅಸ್ತ್ರಗಳಿಂದ ಹಲ್ಲೆ ನಡೆದಿತ್ತು. ಕೂಡಲೇ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಸುರೇಶ್ ಮತ್ತು ಪೀಟರ್ ಹಲ್ಲೆ ನಡೆಸಿರುವ ಆರೋಪಿಗಳು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಚಿಕ್ಕಪೇಟೆ ಎಸಿಪಿ ಮತ್ತು ಕಾಟನ್ ಪೇಟೆ ಪೊಲೀಸರು ಭೇಟಿ ನೀಡಿದ್ದಾರೆ.
ಛಲವಾದಿ ಪಾಳ್ಯದ ಬಿಜೆಪಿ ಪಾಲಿಕೆ ಸದಸ್ಯರಾಗಿದ್ದ ರೇಖಾ ಅವರ ಪತಿ ಕದಿರೇಶ್ ಅವರನ್ನು 2018ರಲ್ಲಿ ಹಾಡಹಗಲೇ ಕಾಟನ್ ಪೇಟೆಯ ಅಂಜಿನಪ್ಪ ಗಾರ್ಡನ್ ನಲ್ಲಿ ಕೊಲೆ ಮಾಡಲಾಗಿತ್ತು.
ಇನ್ನು ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ತಿಳಿಸಿದ್ದಾರೆ.