ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (S.M Krishna) ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್.ಎಂ. ಕೃಷ್ಣ(91) ಅವರು ಹಲವ ದಿನಗಳಿಂದ ಕಾಯಿಲೆಯಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಅವರನ್ನು ಐಸಿಯುಗೆ ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ. ಡಾ.ಸತ್ಯನಾರಾಯಣ ಮೈಸೂರು ಮತ್ತು ಡಾ.ಸುನೀಲ್ ಕಾರಂತ್ ನೇತೃತ್ವದ ತಂಡ ಮಾಜಿ ಸಿಎಂಗೆ ಚಿಕಿತ್ಸೆ ನೀಡುತ್ತಿದೆ.
ಮಾಜಿ ಮುಖ್ಯಮಂತ್ರಿಗೆ ಇತ್ತೀಚೆಗೆ ಜ್ವರ, ಕೆಮ್ಮು ಕಾಣಿಸಿಕೊಂಡಿತ್ತು. ಕೂಡಲೇ ಕುಟುಂಬಸ್ಥರು ಬೆಂಗಳೂರಿನ ಮಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಅವರು ಡಿಸ್ಚಾರ್ಜ್ ಆಗಿದ್ದರು. ಕೆಲವು ದಿನಗಳ ನಂತರ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.