ADVERTISEMENT
Tuesday, July 8, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂಗಳೂರು ಬ್ರ್ಯಾಂಡ್ ಗೆ ದಕ್ಕೆ- ಸಿಎಂಗೆ ಪತ್ರ ಬರೆದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ 

Naveen Kumar B C by Naveen Kumar B C
May 19, 2022
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಬೆಂಗಳೂರು ಬ್ರ್ಯಾಂಡ್ ಗೆ ದಕ್ಕೆ- ಸಿಎಂಗೆ ಪತ್ರ ಬರೆದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ

ಬೆಂಗಳೂರಿನ ಹಲವೆಡೆ ಸುರಿದ ಭಾರಿ ಮಳಯಿಂದಾಗಿ ಬೆಂಗಳೂರಿನ ಬ್ರ್ಯಾಂಡ್ ಗೆ ದಕ್ಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಎಸ್.ಎಂ. ಕೃಷ್ಣ  ಪತ್ರ ಬರೆದಿದ್ದು ಬೆಂಗಳೂರಿಗೆ ಇರುವ  ಇಮೇಜ್ ಉಳಿಸಿಕೊಳ್ಳುವ ಕುರಿತು ಕೆಲವು ಸಲಹೆಗಳನ್ನು ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಿರಂತರ ಮುಂಗಾರ ಪೂರ್ವ ಮಳೆಯಗುತ್ತಿದ್ದು ಇದರಿಂದ ಹಲವು ಅವಾಂತರಗಳ‌ು ಘಟಿಸಿ‌ ಜನಜೀವನಕ್ಕೆ ತೀವ್ರ ತೊಂದರೆಯನ್ನು ಉಂಟುಮಾಡಿದೆ. ಅದರಲ್ಲೂ ವಿಶ್ವದಲ್ಲಿನ ವೇಗದ ಬೆಳವಣಿಗೆಗಳ ನಗರಗಳ‌ ಸಾಲಿನಲ್ಲಿ ಮುಂಚೂಣಿಯಲ್ಲಿ ಇರುವ ಬೆಂಗಳೂರು ನಗರದಲ್ಲಿನ ಮಳೆ ಅನಾಹುತಗಳು ಆತಂಕ ಹುಟ್ಟಿಸಿದೆ. ಇದು ‘ಬ್ರಾಂಡ್ ಬೆಂಗಳೂರು’ ಹೆಸರಿಗೆ ಆತಂಕ ಸೃಷ್ಟಿಸಿದ್ದು, ಭವಿಷ್ಯತ್ತಿನಲ್ಲಿ ಇದರಿಂದ ಕೈಗಾರಿಕೆಗಳ ಸ್ತಾಪನೆ‌ ಮತ್ತು ರಾಜ್ಯಕ್ಕೆ ಬಂಡವಾಳ ಹೂಡುವ ಹೂಡಿಕೆದಾರರಿಗೆ ತಪ್ಪು ಸಂದೇಶ ರವಾನೆಯಾಗಲಿದೆ. ಅದರಿಂದ ಇಲ್ಲಿ ಪ್ರತಿಷ್ಟಾಪನೆಗೊಳ್ಳಬಹುದಾದ ಕೈಗಾರಿಕಾ ವಸಹಾತುಗಳು ಬೇರೆ ರಾಜ್ಯಗಳ ಪಾಲಗಿ ನಮ್ಮ ರಾಜ್ಯದ ಅಭಿವೃದ್ಧಿಗೆ ತೊಡಕಾಗಲಿದೆ ಎಂದು ಎಸ್.ಎಂ. ಕೃಷ್ಣ ಅವರು ಪತ್ರದಲ್ಲಿ ಕಳವಳವನ್ನು ವ್ಯಕ್ತಪಡಿಸಿದ್ದಾರೆ.

Related posts

ಕೃಷಿ ವಿಶ್ವವಿದ್ಯಾಲಯ,ಧಾರವಾಡ ನೇಮಕಾತಿ 2025

ಕೃಷಿ ವಿಶ್ವವಿದ್ಯಾಲಯ,ಧಾರವಾಡ ನೇಮಕಾತಿ 2025

July 8, 2025
ಪಹಲ್ಗಾಮ್ ಉಗ್ರದಾಳಿ: ಲಷ್ಕರ್ ಸಹಚರರು ಎನ್‌ಐಎ ಕಸ್ಟಡಿಗೆ

ಪಹಲ್ಗಾಮ್ ಉಗ್ರದಾಳಿ: ಲಷ್ಕರ್ ಸಹಚರರು ಎನ್‌ಐಎ ಕಸ್ಟಡಿಗೆ

July 8, 2025

ನಾನು ಮುಖ್ಯಮಂತ್ರಿಯಾಗಿದ್ದಾಗ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಆದ್ಯತೆ ನೀಡಿ ವಿಪುಲ ಅವಕಾಶಗಳನ್ನು ನೀಡಿದ್ದರಿಂದ ಅಮೆರಿಕದ ಕ್ಯಾಲಿಫೋರ್ನಿಯಾ ನಗರದ ಸಿಲಿಕಾನ್ ವ್ಯಾಲಿಗೆ ಪರ್ಯಾಯವಾಗಿ ಬೆಂಗಳೂರು ನಗರ ಬೆಳೆದು ಯುವ ಜನಾಂಗಕ್ಕೆ ಲಕ್ಷಾಂತರ ಉದ್ಯೋಗ ಸೃಷ್ಟಿಗೆ ಕಾರಣವಾಯಿತು. ಇದರ ಪರಿಣಾಮವಾಗಿ ಬೆಂಗಳೂರು ಇಂದು ಬೃಹದಾಕಾರವಾಗಿ ಬೆಳೆದು ನಗರದ ವಿಸ್ತೀರ್ಣ ನಾಲ್ಕು ಪಟ್ಟು ಹೆಚ್ಚಾಗಿದೆ. ಬೆಂಗಳೂರು ನಗರ ಪಾಲಿಕೆ ಇಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಾಗಿ ಬದಲಾಗಿ ಬೆಂಗಳೂರು ಸುತ್ತಮುತ್ತಲಿನ ಹಲವು ಬಡಾವಣೆಗಳನ್ನು ತನ್ನ ಒಡಲಲ್ಲಿ ಸೇರಿಸಿಕೊಂಡಿದೆ. ಇದರಿಂದ ಬೆಂಗಳೂರಿನ ಆದಾಯ ನಿರೀಕ್ಷೆಗೂ ಮೀರಿ  ಹೆಚ್ಚಾಗಿ ಅದು ಇಂದು ರಾಜ್ಯದ ಬಜೆಟ್ ಗಾತ್ರದಲ್ಲಿ ಅರ್ಧದಷ್ಟು ಭಾಗ ಬೆಂಗಳೂರು ನಗರದಿಂದ ಹರಿದು ಬರುವಂತಾಗಿದೆ.

ಭವಿಷ್ಯದ ಬೆಂಗಳೂರು ಹಾಗೂ ರಾಜ್ಯದ ಅಭಿವೃದ್ಧಿ ಗಮನದಲ್ಲಿ ಇಟ್ಟಕೊಂಡು ದೂರಗಾಮಿ ದೃಷ್ಟಿಯಿಂದ ಶಾಶ್ವತ ಕಾರ್ಯ ಕ್ರಮಗಳನ್ನು ರೂಪಿಸಿ “ಬ್ರಾಂಡ್ ಬೆಂಗಳೂರು” ಹೆಸರನ್ನು ಉಳಿಸಿಕೊಳ್ಳಲು ದಿಟ್ಟ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯವಾಗಿದ್ದು, ಆ ನಿಟ್ಟಿನಲ್ಲಿ ಕೆಳಕಂಡ ಸಲಹೆಗಳನ್ನು ತಮ್ಮ ಅವಗಾಹನೆಗೆ ತರಬಯಸುತ್ತೆನೆ.

  1. ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ಅಭಿವೃದ್ಧಿಗೆ ರಚಿಸಿದ್ದ ಬೆಂಗಳೂರು ಅಜೆಂಡಾ ಟಾಸ್ಕ್ ಫೋರ್ಸ್ ಸಮಿತಿಯನ್ನು ಪುನರ್ ರಚಿಸಿ ವಿವಿಧ ವಿಭಾಗಗಳ ತಜ್ಞರನ್ನು ಸೇರಿಸಿ ಅವರ ಸಲಹೆಗಳನ್ನು ಪಡೆದು ದೂರಗಾಮಿ ನೆಲೆಯಲ್ಲಿ ಬೆಂಗಳೂರಿನ ಅಭಿವೃದ್ಧಿ ಗೆ ನೀಲಿನಕ್ಷೆ ತಯಾರಿಸುವುದು.
  2. ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಒಳಚರಂಡಿ ವ್ಯವಸ್ಥೆ ಸುಧಾರಿಸಿ ಹೊಸದಾಗಿ ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಗೊಂಡಿರುವ ಬಡಾವಣೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ತಜ್ಞ ಅಧಿಕಾರಿಗಳ ತಂಡ ರಚಿಸುವುದು ಹಾಗೂ ರಾಜಕಾಲುವೆಗಳ ನಿರ್ವಾಹಣೆಗೆ ಆದ್ಯತೆ ಮೇಲೆ ಕ್ರಮ ವಹಿಸಿ ಮುಂಗಾರ ಮಳೆಯ ಆಗಮನಕ್ಕೂ ಮುನ್ನ ಸಮರೋಪದಿಯ ಕಾರ್ಯ ಕೈಗೊಳ್ಳುವುದು.
  3. ಬೆಂಗಳೂರಿಗೆ ಪರ್ಯಾಯವಾಗಿ ಮೈಸೂರು, ತುಮಕೂರು ಮತ್ತು ಹುಬ್ಬಳ್ಳಿಯಂತಹ ನಗರಗಳನ್ನು ಗುರುತಿಸಿ ನೂತನ ಕೈಗಾರಿಕಾ ವಸಹಾತುಗಳ‌ ಸ್ಥಾಪನೆಗೆ ಅವಕಾಶ ಕಲ್ಪಿಸಿ ಬೆಂಗಳೂರಿ ನಗರದ ಮೇಲಿನ ಒತ್ತಡ ಕಡಿಮೆ ಮಾಡುವುದು. ನನ್ನ ಅಧಿಕಾರಾವಧಿಯಲ್ಲಿ ನಿರ್ಮಾಣಗೊಂಡಿದ್ದ ಮೈಸೂರು ಬೆಂಗಳೂರು ಹೆದ್ದಾರಿ ಇಂದು ಹತ್ತು ಪಥಗಳ ರಾಷ್ಟ್ರೀಯ ಹೆದ್ದಾರಿಯಾಗಿ‌ ಮೇಲ್ದರ್ಜೆಗೆ ಏರಿದ್ದು ಇದು ಮೈಸೂರು ನಗರ ಬೆಂಗಳೂರಿಗೆ ಪರ್ಯಾಯವಾಗಿ ಬೆಳವಣಿಗೆ ಹೊಂದಲು ಬಹಳ ಅವಕಾಶ ಕಲ್ಪಿಸುತ್ತದೆ.
  4. ಬೆಂಗಳೂರು ವ್ಯಾಪ್ತಿಯ ಶಾಸಕರು ಸಂಸದರು ಹಾಗೂ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ಪಡೆದು ವಲಯವಾರು ಸಮಸ್ಯೆಗಳನ್ನು ಪತ್ತೆ ಹಚ್ಚಿ ಅವುಗಳ ಶಾಶ್ವತ ಪರಿಹಾರಕ್ಕೆ ಕಾಲ ಮೀತಿಯಲ್ಲಿ ಕಾರ್ಯಕ್ರಮ  ರೂಪಿಸಿ ಅದಕ್ಕೆ ತಕ್ಕ ಅನುದಾನ ಒದಗಿಸುವುದು.

ಮೇಲ್ಕಂಡ ಅಂಶಗಳ ಜೊತೆಗೆ ರಾಜ್ಯದ ಸರ್ವಪಕ್ಷಗಳ ನಾಯಕರ ಸಲಹೆ ಪಡೆದು ರಾಜ್ಯದ ಅಭಿವೃದ್ಧಿ ಮತ್ತು ಭವಿಷ್ಯದ ಜನಾಂಗದ ದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳಲು ಕೋರಿದೆ.

ಎಸ್.ಎಂ. ಕೃಷ್ಣ
ಮಾಜಿ ಮುಖ್ಯಮಂತ್ರಿಗಳು

Tags: #SM KrishnaBasavaraj BommaiChief Minister
ShareTweetSendShare
Join us on:

Related Posts

ಕೃಷಿ ವಿಶ್ವವಿದ್ಯಾಲಯ,ಧಾರವಾಡ ನೇಮಕಾತಿ 2025

ಕೃಷಿ ವಿಶ್ವವಿದ್ಯಾಲಯ,ಧಾರವಾಡ ನೇಮಕಾತಿ 2025

by Shwetha
July 8, 2025
0

UAS Dharwad Engineer Recruitment 2025: ಕೃಷಿ ವಿಶ್ವವಿದ್ಯಾಲಯ, ಧಾರವಾಡವು ತನ್ನ ಮುಖ್ಯ ಆವರಣ ಮತ್ತು ಶಿರಸಿ, ಹನುಮನಮಟ್ಟಿ ಹಾಗೂ ಬಿಜಾಪುರದ ಇತರ ಆವರಣಗಳಲ್ಲಿ ಸಿವಿಲ್ ಹಾಗೂ...

ಪಹಲ್ಗಾಮ್ ಉಗ್ರದಾಳಿ: ಲಷ್ಕರ್ ಸಹಚರರು ಎನ್‌ಐಎ ಕಸ್ಟಡಿಗೆ

ಪಹಲ್ಗಾಮ್ ಉಗ್ರದಾಳಿ: ಲಷ್ಕರ್ ಸಹಚರರು ಎನ್‌ಐಎ ಕಸ್ಟಡಿಗೆ

by Shwetha
July 8, 2025
0

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭಯಾನಕ ಉಗ್ರದಾಳಿಯಲ್ಲಿ 26 ಪ್ರವಾಸಿಗರು ದುರ್ಮರಣ ಹೊಂದಿದ ಘಟನೆಯಿಂದ ಇಡೀ ದೇಶವು ಕಂಗಾಲಾಗಿತ್ತು. ಈ ದಾಳಿಗೆ...

ಕೋವಿಡ್ ನಂತರ ಹೃದಯಾಘಾತ ಪ್ರಕರಣಗಳು ಹೆಚ್ಚಳ: ಲಸಿಕೆಯಿಂದಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಕೋವಿಡ್ ನಂತರ ಹೃದಯಾಘಾತ ಪ್ರಕರಣಗಳು ಹೆಚ್ಚಳ: ಲಸಿಕೆಯಿಂದಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

by Shwetha
July 8, 2025
0

ರಾಜ್ಯದಲ್ಲಿ ಇತ್ತೀಚೆಗೆ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿರುವ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ...

ಗ್ರೇಟರ್ ಬೆಂಗಳೂರು ವಿಭಜನೆ ವಿಚಾರ: ಎಲ್ಲ ಪಕ್ಷಗಳ ಒಮ್ಮತದ ನಂತರವೇ ನಿರ್ಧಾರ – ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

ಗ್ರೇಟರ್ ಬೆಂಗಳೂರು ವಿಭಜನೆ ವಿಚಾರ: ಎಲ್ಲ ಪಕ್ಷಗಳ ಒಮ್ಮತದ ನಂತರವೇ ನಿರ್ಧಾರ – ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

by Shwetha
July 8, 2025
0

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಜನಸಂಖ್ಯೆ, ಸಾರಿಗೆ ಸವಾಲುಗಳು, ಕಚೇರಿ ಕಾರ್ಯಚಟುವಟಿಕೆಗಳು, ಮತ್ತು ನಗರಾಭಿವೃದ್ದಿಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರನ್ನು ವಿಭಜಿಸುವ ಬಗ್ಗೆ ಹಲವು...

ಅನ್ನಭಾಗ್ಯ ಫಲಾನುಭವಿಗಳಿಗೆ ಆಘಾತ: ಆಹಾರ ಧಾನ್ಯ ಸಾಗಣೆ ಸ್ಥಗಿತ

ಅನ್ನಭಾಗ್ಯ ಫಲಾನುಭವಿಗಳಿಗೆ ಆಘಾತ: ಆಹಾರ ಧಾನ್ಯ ಸಾಗಣೆ ಸ್ಥಗಿತ

by Shwetha
July 8, 2025
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜಾರಿಗೆ ತಂದಿದ್ದ ಪ್ರಮುಖ ಐದು ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆ ಒಂದು ಪ್ರಮುಖ ಅಂಶವಾಗಿತ್ತು. ಈ ಯೋಜನೆಯಡಿ ರಾಜ್ಯದ ಲಕ್ಷಾಂತರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram