ಟ್ವಿಟ್ಟರ್ ನಲ್ಲಿ ಮಾಜಿ ಮುಖ್ಯಮಂತ್ರಿಗಳ ಗುದ್ದಾಟ Siddaramaiah saaksha tv
ಬೆಂಗಳೂರು : ಟ್ವಿಟ್ಟರ್ ನಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ನಡುವೆ ಟ್ವೀಟ್ ಯುದ್ಧ ಮತ್ತೆ ಆರಂಭವಾಗಿದೆ.
ಸಿದ್ವರಾಮಯ್ಯರಿಗೆ ಜೆಡಿಎಸ್ ಫೋಬಿಯಾ ಕಾಡುತ್ತಿದೆ. ಚುನಾವಣೆ ಬಂದರೆ ಜೆಡಿಎಸ್ ಚಳಿ-ಜ್ವರ ಹತ್ತುತ್ತದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು. ಇದಕ್ಕೆ ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ನನಗೆ ಹೆಚ್ ಡಿ ಕುಮಾರಸ್ವಾಮಿ, ಹೆಚ್.ಡಿ.ದೇವೇಗೌಡ ಅವರ ಬಗ್ಗೆ ವೈಯಕ್ತಿಕ ದ್ವೇಷ ಇಲ್ಲ. ನಾನು ವಿಷಯಾಧಾರಿತವಾಗಿ, ಸೈದ್ಧಾಂತಿಕವಾಗಿ ಅವರನ್ನು ವಿರೋಧ ಮಾಡಿದ್ದೇನೆ. ನನಗೆ ಜ್ವರವೂ ಇಲ್ಲ, ಜೆಡಿಎಸ್ ಹೆಸರು ಜಪ ಮಾಡಿದ್ರೆ ಜ್ವರ ವಾಸಿಯಾಗೋದು ಇಲ್ಲ ಎಂದು ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.
ಆರ್.ಎಸ್.ಎಸ್ ಗೆ ಬೈಯ್ಯುವ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಸರ್ಕಾರ ನಡೆಸಿದ್ದನ್ನು, ಚುನಾವಣೆಯಲ್ಲಿ ಒಳಒಪ್ಪಂದ ಮಾಡಿಕೊಳ್ಳೋದನ್ನು ವಿರೋಧಿಸಿದ್ದೇನೆ. ಕುಮಾರಸ್ವಾಮಿ ಬಳಿ ಇದಕ್ಕೆ ಸಮರ್ಪಕ ಉತ್ತರ ಇದ್ದರೆ ಕೊಡಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.