ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ವಿರುದ್ಧ ಪೋಕ್ಸೋ (POSCO Case) ಪ್ರಕರಣ ದಾಖಲಾಗಿತ್ತು. ಈಗ ಮತ್ತೆ ಅದಕ್ಕೆ ಜೀವ ಬಂದಂತಾಗಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿಯಿಂದ (BJP) ರಾಜೀನಾಮೆಗೆ ಒತ್ತಾಯ ಹಾಗೂ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಅನುಮತಿ ಸಿಕ್ಕ ಬೆನ್ನಲ್ಲಿಯೇ ಕಾಂಗ್ರೆಸ್ ಸರ್ಕಾರ ಬಿಎಸ್‌ವೈ ವಿರುದ್ಧ ಕಾನೂನು ಪ್ರಕ್ರಿಯೆಗೆ ಚಾಲನೆ ನೀಡಿದೆ.
ಅಲ್ಲದೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ರಕ್ಷಣೆ ತೆರವು ಮಾಡಲು ಹೈಕೋರ್ಟ್ ಗೆ (High Court) ಸಿಐಡಿ ಮೆಮೋ ಸಲ್ಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪರ ಎಸ್ ಪಿಪಿ ಅಶೋಕ್ ನಾಯ್ಕ್ ಅವರು ಮೆಮೋ ಸಲ್ಲಿಕೆ ಮಾಡಿದ್ದಾರೆ. ನ್ಯಾ.ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ನಡೆಸಲಿದೆ.
ಯಡಿಯೂರಪ್ಪ ಬಂಧನಕ್ಕೆ ಹೈಕೋರ್ಟ್ (High Court) ನೀಡಿದ ತಡೆಯಾಜ್ಞೆ ತೆರವಿಗೆ ಸರ್ಕಾರ ಈಗ ಕಸರತ್ತು ನಡೆಸುತ್ತಿದೆ. ಹೀಗಾಗಿ ರಾಜಕೀಯ ಅಂಗಳದಲ್ಲಿ ಈಗ ದ್ವೇಷ ಮನೆ ಮಾಡುತ್ತಿದೆ. ಕಾಂಗ್ರೆಸ್ ಹಣೆಯಲು ಬಿಜೆಪಿ ಯತ್ನಿಸುತ್ತಿದ್ದರೆ, ಬಿಜೆಪಿ ನಾಯಕರನ್ನು ಹಣಿಯಲು ಕಾಂಗ್ರೆಸ್ ಮುಂದಾಗಿದೆ. ಯಡಿಯೂರಪ್ಪ ಅವರನ್ನು ಅರೆಸ್ಟ್ ಮಾಡಿಸಿ ಬಿಜೆಪಿಗೆ ಹಿನ್ನಡೆ ಮಾಡಲು ಹಾಗೂ ಮುಖಭಂಗ ಸೃಷ್ಟಿಸಲು ಕಾಂಗ್ರೆಸ್ ಹವಣಿಸುತ್ತಿದೆ. ಈ ಗುದ್ದಾಟ ಎಲ್ಲಿಗೆ ಹೋಗಿ ನಿಲ್ಲುತ್ತದೆಯೋ ನೋಡಬೇಕಿದೆ.







