ಬೆಂಗಳೂರು : ರಾಜ್ಯದಲ್ಲಿ ಒಂದೆಡೆ ಎಸ್.ಎಸ್.ಎಲ್ ಸಿ ಪರೀಕ್ಷೆ ಮತ್ತೊಂದೆಡೆ ಕೊರೊನಾ ಹೆಚ್ಚಾಗುತ್ತಿರುವ ಹಾವಳಿ. ಇದರಿಂದಾಗಿ ಮತ್ತೊಮ್ಮೆ ಲಾಕ್ ಡೌನ್ ಮಾಡಬೇಕು ಎಂವ ಕೂಗು ಕೇಳಿ ಬಂದಿದೆ. ಕಳೆದ ಎರಡು ದಿನಗಳ ಹಿಂದೆ ಬೆಂಗಳೂರನ್ನು 20 ಸಂಪೂರ್ಣ ಲಾಕ್ ಡೌನ್ ಮಾಡಿ ಎಂದು ಮಾಜಿ ಸಿಎಂ ಹೆಚ್. ಡಿ.ಕುಮಾರಸ್ವಾಮಿ ಹೇಳಿದರು. ಇದೀಗ ಮಾಜಿ ಸಿಎಂ ಹೆಚ್ಡಿಕೆ ರಾಮನಗರ, ಚನ್ನಪಟ್ಟಣ ಲಾಕ್ ಡೌನ್ ಮಾಡಿ ಎಂದು ರಾಮನಗರ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಚನ್ನಪಟ್ಟಣ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕೋವಿಡ್ -19 ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಸಮುದಾಯಕ್ಕೆ ಹರಡುತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಬೆಳ್ಳಿಗ್ಗೆ 7.00 ಗಂಟೆಯಿಂದ 11.00 ಗಂಟೆಯವರೆಗೆ ಸಾರ್ವಜನಿಕರಿಗೆ ದಿನಬಳಕೆಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿ 11.00 ಗಂಟೆಯಿಂದ ಬೆಳಿಗ್ಗೆ 7.00 ಗಂಟೆಯವರೆಗೆ. ಸಾರ್ವಜನಿಕ ಸಂಚಾರವನ್ನು ನಿರ್ಭಂಧಿಸಿ ಅಂಗಡಿ ಮುಂಗಟ್ಟು ಹಾಗೂ ಸಾರ್ವಜನಿಕ ಸಂಪರ್ಕ ವ್ಯವಸ್ಥೆಯನ್ನು ತಡೆಗಟ್ಟಲು ಸಂಪೂರ್ಣವಾಗಿ ಲಾಕ್-ಡೌನ್ ಜಾರಿಗೊಳಿಸಲು ಕ್ರಮ ಕೈಗೊಳ್ಳುವಂತೆ ಕೋರುತ್ತೇನೆ ಎಂದು ಪತ್ರದಲ್ಲಿ ಹೇಳಿದ್ದಾರೆ.