ಬೆಂಗಳೂರು : ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎನ್ನಲಾಗಿದೆ.
ನಿರಂತರ ಪ್ರಚಾರದಿಂದ ಬಳಲಿರುವ ಅವರು ಜ್ವರದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಅನಾರೋಗ್ಯದ ಹಿನ್ನೆಲೆ ಜೆ.ಪಿ.ನಗರದ ನಿವಾಸದಲ್ಲೇ ಕುಮಾರಸ್ವಾಮಿ ಚಿಕಿತ್ಸೆ ಪಡೆದಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರ ಎಲ್ಲ ಚುನಾವಣಾ ಪ್ರಚಾರ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಯಾರನ್ನೂ ಕೂಡ ಭೇಟಿ ಮಾಡಲು ಕುಮಾರಸ್ವಾಮಿ ನಿರಾಕರಿಸಿದ್ದು, ಮನೆಯಲ್ಲಿಯೇ ಇದ್ದು ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಇಂದು ಹೆಚ್ ಡಿಕ ಕುಮಾರಸ್ವಾಮಿ ಪ್ರಚಾರ ಮಾಡಬೇಕಿತ್ತು. ರಾಮನಗರ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಪ್ರಚಾರ ನಡೆಸಬೇಕಿತ್ತು. ಪುತ್ರನ ಗೆಲುವಿಗಾಗಿ ತಾಲೂಕಿನ ಹಾಗಲಹಳ್ಳಿ, ಗುಡ್ಡದಹಳ್ಳಿ, ಸುಗ್ಗನಹಳ್ಳಿ, ಬಿಳಗುಂಬ, ಮಾಯಗಾನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕ್ಯಾಂಪೇನ್ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಅನಾರೋಗ್ಯದ ಕಾರಣ ಕುಮಾರಸ್ವಾಮಿ ಭಾಗವಹಿಸುತ್ತಿಲ್ಲ ಎನ್ನಲಾಗಿದೆ.