ಅನಾರೋಗ್ಯದ ಹಿನ್ನಲೆ ಮಾಜಿ ಸಿಎಂ ಕೃಷ್ಣ ಆಸ್ಪತ್ರೆಗೆ ದಾಖಲು..
ತೀವ್ರ ಅನಾರೋಗ್ಯದ ಕಾರಣದಿಂದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರನ್ನ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಸ್ ಎಂ ಕೃಷ್ಣ ಅವರು ತೀವ್ರವಾದ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದು, ಅವರ ಆರೋಗ್ಯ ಸ್ಥಿತಿಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ನಿಗಾ ವಹಿಸುತ್ತಿದ್ದಾರೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.
ಅವರಿಗೆ ಚಿಕಿತ್ಸೆ ನೀಡುವ ತಂಡದಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ಶ್ವಾಸಕೋಶಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ ಸತ್ಯನಾರಾಯಣ ಮೈಸೂರು ಮತ್ತು ವಿಭಾಗದ ಮುಖ್ಯಸ್ಥ ಡಾ ಸುನೀಲ್ ಕಾರಂತ್ ಕೂಡ ಇದ್ದಾರೆ.