ಬೆಂಗಳೂರು ; ಮಾಜಿ ಸಿಎಂ ಸಿದ್ದರಾಮಯ್ಯ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರಿಗೆ ಆಸ್ಪತ್ರೆಯ ಸಿಬ್ಬಂದಿ ಹೂ ಗುಚ್ಚ ನೀಡಿ ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಿಕೊಟ್ಟಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಆಗಸ್ಟ್ 4 ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಕಾರಣಕ್ಕಾಗಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ 10 ದಿನಗಳಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೆ, ಸಿದ್ದರಾಮಯ್ಯ ಅವರ ಜತೆಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರನ್ನೂ ಪ್ರತ್ಯೇಕಿಸಲಾಗಿತ್ತು. ಆದರೆ, ಇಂದು ಅವರ ಕೊರೊನಾ ಪರೀಕ್ಷೆ ನೆಗೆಟಿವ್ ಎಂದು ಬಂದಿದೆ. ಹೀಗಾಗಿ ಸಿದ್ದರಾಮಯ್ಯ, ಪುತ್ರ ಯತೀಂದ್ರ ಅವರನ್ನು ಡಿಸ್ಜಾರ್ಜ್ ಮಾಡಲಾಗಿದೆ.
ಅಲ್ಲದೆ ಮುಂದಿನ ಒಂದು ವಾರಗಳ ಕಾಲ ಮನೆಯಲ್ಲಿ ಕ್ವಾರಂಟೈನ್‌ಗೆ ಒಳಗಾಗುವಂತೆಯೂ ವೈದ್ಯರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.








