ಬೆಂಗಳೂರು : ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದೆ. ಹೀಗಾಗಿ ಎಲ್ಲ ರಾಜಕೀಯ ನಾಯಕರು ಚುನಾವಣೆ ಪ್ರಚಾರದಲ್ಲಿ ಬ್ಯೂಸಿಯಾಗಿದ್ದಾರೆ. ಆದರೆ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾತ್ರ ರಾಜಕೀಯ ಒತ್ತಡದ ನಡುವೆಯೂ ಐಪಿಎಲ್ ಮ್ಯಾಚ್ ವೀಕ್ಷಿಸಿದ್ದಾರೆ.
16ನೇ ಆವೃತ್ತಿಯ ಐಪಿಎಲ್ ಆರಂಭಗೊಂಡಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ಮತ್ತು ಮುಂಬಯಿ ಇಂಡಿಯನ್ಸ್ ನಡುವೆ ಪಂದ್ಯ ನಡೆದಿತ್ತು. ಕ್ರೀಡಾಂಗಣದ ತುಂಬಾ ಲಕ್ಷಾಂತರ ಅಭಿಮಾನಿಗಳು ನೆರೆದಿದ್ದರು. ಈ ಪಂದ್ಯ ವೀಕ್ಷಣೆಗೆ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯ ಆಪ್ತರೊಂದಿಗೆ ತೆರಳಿ ಪಂದ್ಯ ವೀಕ್ಷಿಸಿದ್ದಾರೆ.
ಈ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ವಿರುದ್ಧ ಆರ್ ಸಿಬಿ ತಂಡ ಅದ್ಭುತ ಆರಂಭ ಪಡೆದಿದೆ. ಹೀಗಾಗಿ ಆರ್‌ಸಿಬಿ ತಂಡಕ್ಕೆ ಗೆಲ್ಲಲು ಮುಂಬೈ ಇಂಡಿಯನ್ಸ್ ತಂಡ ಸವಾಲಿನ ಗುರಿ ನೀಡಿತು.
ಮುಂಬೈ ಇಂಡಿಯನ್ಸ್ ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ಗಳು ಆರ್‌ಸಿಬಿ ಬೌಲಿಂಗ್ ದಾಳಿಗೆ ತತ್ತರಿಸಿದರೂ ಮಧ್ಯಮ ಕ್ರಮಾಂಕದ ಆಟಗಾರ ತಿಲಕ್ ವರ್ಮಾ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದಿಂದ ಆರ್‌ಸಿಬಿ ತಂಡದ ಲೆಕ್ಕಾಚಾರ ಬುಡಮೇಲಾಯಿತು. ಮುಂಬಯಿ ಇಂಡಿಯನ್ಸ್ ತಂಡ ಆರ್‌ಸಿಬಿಗೆ ಈ ಪಂದ್ಯದಲ್ಲಿ ಗೆಲ್ಲಲು 172 ರನ್ ಗಳ ಸವಾಲಿನ ಗುರಿ ನಿಗದಿಪಡಿಸಿದೆ.








