ಬೆಂಗಳೂರು : ರಾಜ್ಯದಲ್ಲಿ ಲಾಕ್‍ಡೌನ್ ಜಾರಿಯಾಗಿ ಒಂದು ತಿಂಗಳಿಗಿಂತ ಹೆಚ್ಚು ದಿನಗಳಾಗಿದೆ. ನಿತ್ಯದ ದುಡಿಮೆಯನ್ನು ಆಧರಿಸಿ ಬದುಕುತ್ತಿದ್ದ ಹಾಗೂ ಸಾಂಪ್ರದಾಯಿಕ ವೃತ್ತಿಯನ್ನು ಅವಲಂಬಿಸಿದವರ ಜೀವನ ದುಸ್ತರವಾಗಿದೆ.
ಈ ಬಗ್ಗೆ ಚರ್ಚೆ ನಡೆಸಲು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸವಿತಾ ಸಮಾಜದವರು, ಮಡಿವಾಳರು, ನೇಕಾರರು, ಕುಂಬಾರರು, ಕಮ್ಮಾರರು, ಚಮ್ಮಾರರು ಹಾಗೂ ಅಟೋ, ಟ್ಯಾಕ್ಸಿ ಚಾಲಕರು ಮತ್ತು ಬೀದಿ ಬದಿಯ ವ್ಯಾಪಾರಿಗಳ ಸಂಘಟನೆಯ ಮುಖಂಡರ ಸಭೆ ಕರೆದಿದ್ದಾರೆ.
ಈ ವರ್ಗದವರು ಎದುರಿಸುತ್ತಿರುವ ಸಮಸ್ಯೆಗಳು, ಅವರಿಗೆ ನೆರವು ಒದಗಿಸುವಂತೆ ಸರ್ಕಾರದ ಮೇಲೆ ಒತ್ತಡ ತರಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ








