ಮಾಜಿ ಸಿಎಂಗಳ ವಾಕ್ ಪ್ರಹಾರ Saaksha Tv
ಬೆಂಗಳೂರು: ಮಾಜಿ ಸಿಎಂಗಳ ನಡುವೆ ವಾಕ್ ಯುದ್ದ ನಡೆದಿದ್ದು, ಟ್ವಿಟರ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ “ಸ್ವಯಂ ಘೋಷಿತ ಸಂವಿಧಾನ ಪಂಡಿತ ಸಿದ್ದರಾಮಯ್ಯ” ನಮ್ಮ ಪಕ್ಷ ಮತ್ತು ನಮ್ಮ ಬಗ್ಗೆ ಲಘುವಾಗಿ ಮಾತನಾಡಿದ್ದಕ್ಕೆ ನಾನು ಉತ್ತರ ಕೊಟ್ಟಿದ್ದೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ಟ್ವಿಟ್ ಮಾಡಿದ್ದಾರೆ.
ಮೊನ್ನೆ ವಿಪಕ್ಷ ನಾಯಕ ಸಿದ್ದರಾಮಯ್ಯ ಜೆಡಿಎಸ್ ಅನ್ನೋದು ಬಿಜೆಪಿಯ ‘ಬಿ ಟೀಂ’ ಅಂತ ಟೀಕಿಸಿದ್ದರು. ಜೆಡಿಎಸ್ ಪಕ್ಷ ಅನ್ನುವುದು ಸಿದ್ಧಾಂತವಿಲ್ಲದ ಪಾರ್ಟಿ ಅಂತ ಟೀಕಿಸಿದ್ದರು. ಒಂದಿನ ಬಿಜೆಪಿ ಜೊತೆ ಇರುತ್ತಾರೆ, ಮತ್ತೆ ಕೆಲವೇ ದಿನಗಳಲ್ಲಿ ಜೆಡಿಎಸ್ ಬೇರೆ ಪಕ್ಷದೊಂದಿಗೆ ಹೋಗುತ್ತದೆ. ಹೀಗಾಗಿ ತುಮಕೂರಿನಿಂದ ಜೆಡಿಎಸ್ ಅನ್ನು ಕಿತ್ತೊಗೆಯಿರಿ ಅಂತ ಕರೆಕೊಟ್ಟಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಹೆಚ್.ಡಿ.ಕೆ ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ. ಪಕ್ಷ ಕಟ್ಟುವ ದೈರ್ಯವಿಲ್ಲ. ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವ, ಕಂಡೋರ ಕಷ್ಟದ ಮೇಲೆ ಅಧಿಕಾರ ಅನುಭವಿಸುವ ಸಿದ್ದರಾಮಯ್ಯ. ನೀವು ಜೆಡಿಎಸ್ ಬಗ್ಗೆ ಮಾತನಾಡುವುದು ಯಾಕೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮುಂದುವರೆದು ಇನ್ನು ಕಮೀಷನ್ ವ್ಯವಹಾರದಲ್ಲಿ ನಾನು ನೀಟ್, ಕ್ಲೀನ್ ಎನ್ನುತ್ತಿದ್ದಾರೆ ಪ್ರತಿಪಕ್ಷ ನಾಯಕರು. ಐದು ವರ್ಷ ಸಿಎಂ ಆಗಿದ್ದರೂ ನಾನು ಕ್ಲೀನ್ ಎಂದು ಕೊಚ್ಚಿಕೊಳ್ಳುತ್ತಿದ್ದಾರೆ. ಹಾಗಾದರೆ, ಇವತ್ತಿಗೂ ಕೇಳಿಸುತ್ತಿರುವ ‘ ಅರ್ಕಾವತಿ ‘ ಆರ್ತನಾದಕ್ಕೆ ಕಾರಣರು ಯಾರು ಎಂದು ಪ್ರಶ್ನಿಸಿದ್ದಾರೆ.