ಕೊರೊನಾಗೆ ತಿರುಪತಿ ದೇವಾಲಯದ ಮಾಜಿ ಪ್ರಧಾನ ಅರ್ಚಕ ಬಲಿ
ತಿರುಪತಿ : ತಿರುಮಲದ ವೆಂಕಟೇಶ್ವರ ದೇವಸ್ಥಾನದ ಮಾಜಿ ಪ್ರಧಾನ ಅರ್ಚಕ ಪೆದ್ದಿನಟಿ ಶ್ರೀನಿವಾಸ ದೀಕ್ಷಿತರು ಕೊರೊನಾಗೆ ಬಲಿಯಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ನಾಲ್ಕು ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದ ಇವರನ್ನು ವೆಂಕಟೇಶ್ವರ ವೈದ್ಯಕೀಯ ಮಹಾ ವಿದ್ಯಾಲಯಕ್ಕೆ ಸೇರಿಸಲಾಗಿತ್ತು. ಅಲ್ಲಿ ಪರೀಕ್ಷೆಗೊಳಪಡಿಸಿದಾಗ ಅವರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿತ್ತು. ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇನ್ನು ತಿರುಪತಿಯ ಹದಿನೆಂಟು ಅರ್ಚಕರಿಗೆ ಕೊರೊನಾ ಇರುವುದು ಪತ್ತೆಯಾಗಿದ್ದು, ಚೆನ್ನೈ ಆಸ್ಪತ್ರೆಯಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮತ್ತೋರ್ವ ನಿವೃತ್ತ ಪ್ರಧಾನ ಅರ್ಚಕ ರಮಣ ದಿಕ್ಸ್ಗಿತ್ ತಿರುಮಲ ವೆಂಕಟೇಶ್ವರ ದೇವಸ್ಥಾನ ತಾತ್ಕಾಲಿಕವಾಗಿ ಮುಚ್ಚಲು ಸರಕಾರವನ್ನು ಒತ್ತಾಯಿಸಿದ್ದಾರೆ.