ರಾಜಕೀಯ ತೊರೆದು ಸನ್ಯಾಸ ದೀಕ್ಷೆ ಸ್ವೀಕರಿಸಿದ ಬಿ.ಜೆ ಪುಟ್ಟಸ್ವಾಮಿ
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಬಿ.ಜೆ ಪುಟ್ಟಸ್ವಾಮಿ ರಾಜಕೀಯ ತೊರೆದು ಸನ್ಯಾಸ ದೀಕ್ಷೆ ಸ್ವೀಕರಿಸಿದ್ದಾರೆ. ಯೋಜನಾ ಆಯೋಗದ ಉಪಾಧ್ಯಕ್ಷರಾಗಿದ್ದ ಬಿ.ಜೆ. ಪುಟ್ಟಸ್ವಾಮಿ ಶುಕ್ರವಾರ ಸನ್ಯಾಸ ದೀಕ್ಷೆ ಸ್ವೀಕರಿಸಿದ್ದಾರೆ.
ನೆಲಮಂಗಲ ಸಮೀಪವಿರುವ ತೈಲೇಶ್ವರ ಗಾಣಿಗರ ಸಂಸ್ಥಾನ ಮಠದಲ್ಲಿ ಶ್ರೀ ಕೈಲಾಸ ಆಶ್ರಮ ಮಹಾಸಂಸ್ಥಾನದ ಪೀಠಾಧಿಪತಿ ಪರಮಪೂಜ್ಯ ಶ್ರೀ ಜಯೇಂದ್ರಪುರಿ ಮಹಾಸ್ವಾಮಿ ಅವರು ಪುಟ್ಟಸ್ವಾಮಿ ಅವರಿಗೆ ಸನ್ಯಾಸ ದೀಕ್ಷೆ ನೀಡಿದರು.
ಶ್ರೀ ಪೂರ್ಣಾನಂದ ಪುರಿ ಸ್ವಾಮಿಗಳೆಂದು ಪುಟ್ಟಸ್ವಾಮಿ ಅವರಿಗೆ ನಾಮಕರಣ ಮಾಡಲಾಗಿದೆ. ಪುಟ್ಟಸ್ವಾಮಿ ಅವರು ಸದ್ಯದಲ್ಲೇ ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಪ್ರಥಮ ಪೀಠಾಧಿಪತಿಯಾಗಲಿದ್ದಾರೆ.
ಮೇ 15 ರಂದು ಬೆಂಗಳೂರಿನ ಮಾದನಾಯ್ಕನಹಳ್ಳಿಯಲ್ಲಿರುವ ಶ್ರೀ ಕ್ಷೇ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಪ್ರಥಮ ಪೀಠಾಧಿಪತಿಯಾಗಿ ಅಲಂಕೃತಗೊಳ್ಳಿಲಿದ್ದಾರೆ.
ಈ ಪಟ್ಟಾಭಿಷೇಕ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಸಿಎಂ ಎಸ್ ಎಂ ಕೃಷ್ಣ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಆದ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವಾರು ಸಚಿವರು ಭಾಗವಹಿಸಲಿದ್ದಾರೆ. ಮುಖ್ಯವಾಗಿ 20 ಮಠಾಧೀಕ್ಷರು ದಿವ್ಯ ಸಾನಿಧ್ಯವನ್ನ ವಹಿಸಿಲಿದ್ದಾರೆ.