ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಯವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜನಾರ್ಧನ ರೆಡ್ಡಿ ಅವರು ನಾಳೆ (ಆಗಸ್ಟ್ 30) ಬಳ್ಳಾರಿಗೆ ತೆರಳಬೇಕಾಗಿತ್ತು. ಇದಕ್ಕೂ ಮುನ್ನ ಇಂದು ಸಂಜೆ ಅವರು ಕೊರೋನಾ ಪರೀಕ್ಷೆಗೆ ಒಳಗಾಗಿದ್ದರು. ಈ ವೇಳೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.
ಈ ಕುರಿತಂತೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಜನಾರ್ಧನ ರೆಡ್ಡಿಯವರು, ಇಂದು ಸಂಜೆ ನನಗೆ ಕೊರೋನಾ ಸೊಂಕು ದೃಢಪಟ್ಟಿರುವ ಹಿನ್ನಲೆಯಲ್ಲಿ ನಾನು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವೆ. ಆ ಕಾರಣದಿಂದ ನಾನು ನಾಳೆ ಆಗಸ್ಟ್ ೩೦ ರಂದು ಬಳ್ಳಾರಿಗೆ ಭೇಟಿ ನೀಡಿ ನನ್ನ ಪ್ರಾಣ ಸ್ನೇಹಿತ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿಯವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಆಸ್ಪತ್ರೆಯಲ್ಲಿ ಉತ್ತಮ ವೈದ್ಯರ ತಂಡ ನನಗೆ ಚಿಕಿತ್ಸೆ ನೀಡುತ್ತಿದೆ. ನನಗೆ ಯಾವುದೇ ರೋಗದ ಲಕ್ಷಣಗಳು ಇಲ್ಲದಿದ್ದರೂ ಕೊರೋನಾ ಪಾಸಿಟಿವ್ ಬಂದಿದೆ. ನಿಮ್ಮೆಲ್ಲರ ಆಶೀರ್ವಾದದಿಂದ ಆದಷ್ಟು ಬೇಗ ಗುಣಮುಖನಾಗಿ ಮನೆಗೆ ಮರಳಲಿದ್ದೇನೆ.
ಅಂದಿದ್ದಾರೆ