ಚಾಮರಾಜನಗರ: ಮಾಜಿ ಸಚಿವ ಎನ್ ಮಹೇಶ್ (N Mahesh) ಅವರ ಮನೆಯಲ್ಲಿ ಕಳ್ಳತನ ನಡೆದಿರುವ ಘಟನೆ ನಡೆದಿದೆ.
ಚಾಮರಾಜನಗರ (Chamarajanagara) ಜಿಲ್ಲೆಯ ಕೊಳ್ಳೇಗಾಲದ ಆದರ್ಶ ಬಡಾವಣೆಯಲ್ಲಿನ ಮಹೇಶ್ ಮನೆಗೆ ನುಗ್ಗಿ ಕಳ್ಳರು ಹಣ ದೋಚಿ ಪರಾರಿಯಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ್ದ ಖದೀಮರು ಬಾಗಿಲ ಬೀಗ ಮುರಿದು ಮನೆಯಲ್ಲಿದ್ದ 50 ಸಾವಿರ ರೂ. ದೋಚಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಕೊಳ್ಳೇಗಾಲ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.