ಉಡುಪಿ: ಮೀನುಗಾರಿಕೆ ಇಲಾಖೆಯ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ (Pramod Madhwaraj) ಅವರು ತೀವ್ರ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಮೋದ್ ಅವರಿಗೆ ಮಂಗಳವಾರ ರಾತ್ರಿ ಏಕಾಏಕಿ ಅನಾರೋಗ್ಯ ಕಾಣಿಸಿಕೊಂಡಿದೆ. ವಿಪರೀತ ಜ್ವರ ಮತ್ತು ಗಂಟಲು ಸೋಂಕಿಗೆ ಒಳಗಾಗಿ, ಉಸಿರಾಟ ಸಮಸ್ಯೆ ಎದುರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.
ವಿಪರೀತ ಜ್ವರ ತಲೆಗೆ ಏರಿದ ಕಾರಣ ಮನೆಯಲ್ಲಿ ಪ್ರಮೋದ್ ಮಧ್ವರಾಜ್ ತೀವ್ರ ಅಸ್ವಸ್ಥರಾಗಿದ್ದರು. ಕಳೆದ ಒಂದು ತಿಂಗಳಿಂದ ನಿರಂತರವಾಗಿ ಪ್ರವಾಸ ಮತ್ತು ಹಲವಾರು ಕಾರ್ಯಕ್ರಮಗಳಿಗೆ ಭಾಗಿಯಾಗುತ್ತಿದ್ದ ಹಿನ್ನೆಲೆಯಲ್ಲಿ ಅನಾರೋಗ್ಯ ಬಾಧಿಸಿರಬಹುದು ಎನ್ನಲಾಗಿದೆ.