ಮಂಗಳೂರು : ಕಾಂಗ್ರೆಸ್ ಮಾಜಿ ಶಾಸಕ ಐವಾನ್ ಡಿಸೋಜಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಮಾಜಿ ಸಚಿವ ಯು.ಟಿ ಖಾದರ್ ಅವರು ಸ್ವಯಂ ಹೋಂ ಕ್ವಾರಂಟೈನ್ ಆಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಯು.ಟಿ.ಖಾದರ್, “ಮಾಜಿ ಶಾಸಕ ಐವನ್ ಡಿಸೋಜಾ ಹಾಗೂ ಲಕ್ಷಾಂತರ ಮಂದಿ ಕೋವಿಡ್ ಸೋಂಕಿತರಾಗಿರಾಗಿದ್ದಾರೆ. ಇವರೆಲ್ಲರೂ ಶೀಘ್ರದಲ್ಲೇ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಕೆಲ ದಿನಗಳಿಂದ ಐವನ್ ಡಿಸೋಜಾ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾರಣ ನಾನು ಕೆಲವು ದಿನಗಳ ಕಾಲ ಸ್ವಯಂ ನಿರ್ಬಂಧ ಹಾಕಿಕೊಂಡಿದ್ದೇನೆ”.
https://twitter.com/utkhader/status/1289775421563625473?s=20
“ಹೀಗಾಗಿ ಇಂದು ನಿಗದಿಯಾಗಿದ್ದ ಜನ ಸಮಾನ್ಯರ ಭೇಟಿ, ಕ್ಷೇತ್ರದ ಅಭಿವೃದ್ದಿ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆಗಿನ ಸಭೆ, ಕ್ಷೇತ್ರದಲ್ಲಿ ನಿಗದಿಯಾಗಿದ್ದ ವಿವಿಧ ಕಾರ್ಯಕ್ರಮಗಳು ಮುಂದೂಡಲ್ಪಟ್ಟಿದ್ದೆ.ಜನ ಸಾಮಾನ್ಯರ ಸೇವೆಗೆ ದೂರವಾಣಿ ಮೂಲಕ ಲಭ್ಯವಿದ್ದು ಅಗತ್ಯವಿದ್ದಲ್ಲಿ ನೇರವಾಗಿ ದೂರವಾಣಿ ಮೂಲಕ ನನ್ನನ್ನ ಎಂದಿನಂತೆ ಸಂಪರ್ಕಿಸಬಹುದಾಗಿದೆ”.
“ಇದೇ ವೇಳೆ ಐವನ್ ಡಿಸೋಜಾ ಜೊತೆಗೆ ಪ್ರಾಥಮಿಕ ಸಂಪರ್ಕಿತದಲ್ಲಿದ್ದವರು ಕೆಮ್ಮು ಜ್ವರ ಮುಂತಾದ ಲಕ್ಷಣ ಕಂಡು ಬಂದಲ್ಲಿ ತಕ್ಷಣ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡುತ್ತೇನೆ” ಎಂದು ಬರೆದುಕೊಂಡಿದ್ದಾರೆ.