ರಾಮನಗರ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ (CP Yogeshwar)ಗೆ ಪಿತೃ ವಿಯೋಗ ಉಂಟಾಗಿದೆ.
ಯೋಗೇಶ್ವರ್ ತಂದೆ (Father) ವಯೋಸಹಜ ಕಾಯಿಲೆಯಿಂದ ಭಾನುವಾರ ನಿಧನರಾಗಿದ್ದಾರೆ. ಸಿಪಿವೈ ಅವರ ತಂದೆ ನಿವೃತ್ತ ಶಿಕ್ಷಕ ಪುಟ್ಟಮಾದೇಗೌಡ (89) ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ (Bengaluru) ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಭಾನುವಾರ ಚಿಕಿತ್ಸೆ ಫಲಕಾರಿಯಾಗದೆ ಪುಟ್ಟಮಾದೇಗೌಡ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ.
ಮೃತ ಪುಟ್ಟಮಾದೇಗೌಡ ಅವರಿಗೆ ಸಿ.ಪಿ ಯೋಗೇಶ್ವರ್ ಸೇರಿದಂತೆ ಇಬ್ಬರು ಗಂಡು ಮಕ್ಕಳು, ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಮೃತರ ಅಂತ್ಯಕ್ರಿಯೆಯು ಸೋಮವಾರ ಸ್ವಗ್ರಾಮ ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.








