ಚಾಮರಾಜನಗರ: ಮಾಜಿ ಸಿಎಂ ಎಸ್.ಎಂ. ಕೃಷ್ಣ ವಿಧಿವಶರಾಗಿದ್ದಾರೆ. ಇದರ ಬೆನ್ನಲ್ಲೇ ಮಾಜಿ ಶಾಸಕರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಕೊಳ್ಳೇಗಾಲದ (Kollegala) ಮಾಜಿ ಶಾಸಕ ಎಸ್ ಜಯಣ್ಣ (S Jayanna) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಜಯಣ್ಣ ಅವರು ಮನೆ ನಿರ್ಮಿಸಿದ್ದರಿಂದಾಗಿ ಗೃಹ ಪ್ರವೇಶದ ಆಹ್ವಾನ ಪತ್ರಿಕೆ ಕೊಡುವುದಕ್ಕಾಗಿ ಮೈಸೂರಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಕೋಳ್ಳೇಗಾಲ ತಾಲೂಕಿನ ಉತ್ತಂಬಳ್ಳಿ ಬಳಿ ಜಯಣ್ಣ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಕೂಡಲೇ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
ಜಯಣ್ಣ ಅವರು ಸದ್ಯ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದರು. ಜಯಣ್ಣ ಎರಡು ಬಾರಿ ಶಾಸಕರಾಗಿದ್ದರು. ಅನಾರೋಗ್ಯದ ಹಿನ್ನೆಲೆ 2018ರಲ್ಲಿ ಟಿಕೆಟ್ ನೀಡಿರಲಿಲ್ಲ. ಸಿಎಂ ಸಿದ್ದರಾಮಯ್ಯ ಆಪ್ತರಲ್ಲಿ ಒಬ್ಬರಾಗಿದ್ದರು. ಅವರ ಅಂತ್ಯಕ್ರಿಯೆ ಬುಧವಾರ ಮಾಂಬಳ್ಳಿ ಗ್ರಾಮದಲ್ಲಿ ನಡೆಯಲಿದೆ.








