ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮುಮ್ತಾಜ್ ಅಲಿ (52) ನಾಪತ್ತೆಯಾದ ಸಹೋದರ. ಮಂಗಳೂರಿನ ಕುಳೂರಿನ ಸೇತುವೆ ಮೇಲೆ ಮುಮ್ತಾಜ್ ಕಾರು ಪತ್ತೆ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.
ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೇರಿದಂತೆ ಕುಟುಂಬಸ್ಥರು ಭೇಟಿ ನೀಡಿದ್ದಾರೆ. ನದಿಯಲ್ಲಿ ಎಸ್ ಡಿಆರ್ ಎಫ್, ಎನ್ ಡಿಆರ್ ಎಫ್, ಅಗ್ನಿಶಾಮಕದಳ ಸಿಬ್ಬಂದಿ ಹುಡುಕಾಟ ಕೈಗೊಂಡಿದ್ದಾರೆ.
ಇಂದು ಬೆಳಗಿನ ಜಾವ 3 ಗಂಟೆಗೆ ಮುಮ್ತಾಜ್ ಅಲಿ ಮನೆಯಿಂದ ಹೊರ ಹೋಗಿದ್ದರು. ಬೆಳಗ್ಗೆ 6 ಗಂಟೆಗೆ ಕುಳೂರು ಸೇತುವೆ ಮೇಲೆ ಮುಮ್ತಾಜ್ ಕಾರು ಪತ್ತೆಯಾಗಿದೆ. ಬಿಎಂಡಬ್ಲ್ಯೂ ಕಾರು ಡ್ಯಾಮೇಜ್ ಆದ ಸ್ಥಿತಿಯಲ್ಲಿದೆ. ಅವರು ಉದ್ಯಮದಲ್ಲಿ ಗುರುತಿಸಿಕೊಂಡಿದ್ದರು. ಸದ್ಯ ಸ್ಥಳದಲ್ಲಿ ಕುಟುಂಬಸ್ಥರು ಗೋಳಾಡುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.