ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅರೋಗ್ಯ ಸ್ಥಿತಿ ಗಂಭೀರ….
ಪಾಕಿಸ್ತಾನದ ಮಾಜಿ ಅಧ್ಯಕ್ಷ ಮತ್ತು ಸೇನಾ ಸರ್ವಾಧಿಕಾರಿ ಜನರಲ್ ಪರ್ವೇಜ್ ಮುಷರಫ್ ಕಳೆದ ಮೂರು ವಾರಗಳಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಸದ್ಯ ಚಿಂತಾಜನಕವಾಗಿದೆ.
ಟ್ವಿಟ್ಟರ್ ನಲ್ಲಿ ಅವರ ಕುಟುಂಬದವರು ನೀಡಿರುವ ಮಾಹಿತಿ ಪ್ರಕಾರ ಅವರು ಅಮಿಲಾಯ್ಡೋಸಿಸ್ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಇದರಿಂದಾಗಿ ಅವರ ಎಲ್ಲಾ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಿಸಿವೆ ಎಂದು ಹೇಳಿದ್ದಾರೆ. ಈಗ ಅವರ ಆರೋಗ್ಯ ಚೇತರಿಕೆಗೆ ಅವಕಾಶವಿಲ್ಲ ಎಂದು ತಿಳಿದುಬಂದಿದೆ.
UK ಯ ರಾಷ್ಟ್ರೀಯ ಆರೋಗ್ಯ ಸೇವೆ (NHS) ಪ್ರಕಾರ, ಅಮಿಲೋಯ್ಡೋಸಿಸ್ ಅಪರೂಪದ ಮತ್ತು ಗಂಭೀರ ಕಾಯಿಲೆಗಳಲ್ಲಿ ಒಂದಾಗಿದೆ. ಈ ಕಾಯಿಲೆಯಲ್ಲಿ ಅಮಿಲಾಯ್ಡ್ ಎಂಬ ಅಸಹಜ ಪ್ರೋಟೀನ್ ಮಾನವ ದೇಹದಲ್ಲಿ ರೂಪುಗೊಳ್ಳಲು ಪ್ರಾರಂಭಿಸುತ್ತದೆ. ಇದು ಹೃದಯ, ಮೂತ್ರಪಿಂಡ, ಯಕೃತ್ತು, ನರಮಂಡಲ, ಮೆದುಳು ಮುಂತಾದ ಅಂಗಗಳಲ್ಲಿ ಸಂಗ್ರಹಗೊಳ್ಳಲು ಪ್ರಾರಂಭಿಸುತ್ತದೆ, ಇದರಿಂದಾಗಿ ಈ ಅಂಗಗಳ ಅಂಗಾಂಶಗಳು ಸರಿಯಾಗಿ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ.
ಅಮಿಲಾಯ್ಡ್‌ನ ಶೇಖರಣೆಯು ತುಂಬಾ ಅಪಾಯಕಾರಿಯಾಗಿದ್ದು, ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆಯದಿದ್ದರೆ ವ್ಯಕ್ತಿಯು ಅಂಗಾಂಗ ವೈಫಲ್ಯದ ಅಪಾಯಕ್ಕೆ ತುತ್ತಾಗುವ ಸಾಧ್ಯತೆ ಇರುತ್ತದೆ. ಮುಷರಫ್ ಗೆ 2018 ರಲ್ಲಿ ಈ ಕಾಯಿಲೆ ಇರುವುದು ಪತ್ತೆಯಾಯಿತು, ನಂತರ ಚಿಕಿತ್ಸೆ ಪಡೆಯುತ್ತಿದ್ದಾರೆ.








