ನವದೆಹಲಿ : ಮೆದುಳಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಇಲ್ಲ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಹಿನ್ನೆಲೆ ಕಳೆದ ಸೋಮವಾರ ಅವರಿಗೆ ಮೆದುಳಿನ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಶಸ್ತ್ರಚಿಕಿತ್ಸೆ ಯಶಸ್ವಿಯಾದರೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಅವರಿಗೆ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ಮುಂದುವರೆಸಲಾಗಿದೆ. ನುರಿತ ವೈದ್ಯರ ತಂಡ ಪ್ರಣಬ್ ಮುಖರ್ಜಿ ಅವರ ಚಿಕಿತ್ಸೆ ಮೇಲ್ವಿಚಾರಣೆಯನ್ನು ನಿರಂತರವಾಗಿ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇದಲ್ಲದೆ ಕಳೆದ ಆಗಸ್ಟ್ 10ರಂದು ಪ್ರಣಬ್ ಮುಖರ್ಜಿ ಅವರಿಗೆ ಕೊರೊನಾ ಪಾಸಿಟಿವ್ ದೃಢವಾಗಿತ್ತು.









