ನವದೆಹಲಿ: ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಕಾರಣ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಲ್ಲಿ ಶ್ವಾಸಕೋಶದ ಸೋಂಕಿನ ಲಕ್ಷಣಗಳು ಕಂಡುಬಂದಿದ್ದು, ಆರೋಗ್ಯ ಸ್ಥಿತಿ ಕ್ಷೀಣಿಸುತ್ತಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
ಆರ್ಮಿ ರಿಸರ್ಚ್ ಅಂಡ್ ರೆಫೆರಲ್’ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರಣಬ್ ಮುಖರ್ಜಿ ಅವರಿಗೆ ವೆಂಟಿಲೇಟರ್ ನೆರವಿನೊಂದಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಬಗ್ಗೆ ನಿಗಾವಹಿಸಿದೆ.
84 ವರ್ಷದ ಮುಖರ್ಜಿ ಅವರು ಈ ತಿಂಗಳ 10ರಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಸ್ತ್ರ ಚಿಕಿತ್ಸೆಗೂ ಮುನ್ನ ಪ್ರಣವ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದೂ ದೃಢಪಟ್ಟಿತ್ತು. ಈ ಕುರಿತು ಅವರೇ, ಆಸ್ಪತ್ರೆಗೆ ದಾಖಲಾಗುವುದಕ್ಕೂ ಮುನ್ನ ಟ್ವೀಟ್ ಮಾಡಿದ್ದರು.








