ನವದೆಹಲಿ : ಮಾಜಿ ರಾಷ್ಟ್ರಪತಿ ಭಾರತ ರತ್ನ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಮತ್ತಷ್ಟು ವಿಷಮವಾಗಿದ್ದು, ತೀವ್ರ ಪ್ರಜ್ಞಾಶೂನ್ಯ ಸ್ಥಿತಿಗೆ ತಲುಪಿದ್ದಾರೆ.
ಮೆದುಳಿನ ಸೂಕ್ಷ್ಮ ನರದಲ್ಲಿ ರಕ್ತ ಹೆಪ್ಪುಗಟ್ಟಿದ ಕಾರಣ ಮುಖರ್ಜಿ ಅವರನ್ನು ಆಗಸ್ಟ್ 10ರಂದು ದೆಹಲಿಯ ಆರ್ಮಿಸ್ ರಿಸರ್ಚ್ ಅಂಡ್ ರೆಫರೆಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಪರೀಕ್ಷೆ ನಡೆಸಿದಾಗ ಅವರಿಗೆ ಕೊರೊನಾ ವೈರಸ್ ಸೋಂಕು ಸಹ ತಗುಲಿರುವುದು ದೃಢಪಟ್ಟಿತ್ತು. ಬಳಿಕ ಅವರ ಮೆದುಳಿನಲ್ಲಿ ಹೆಪ್ಪುಗಟ್ಟದ್ದ ರಕ್ತವನ್ನು ತೆಗೆದುಹಾಕಲು ಸೂಕ್ಷ್ಮ ಶಸ್ತ್ರಚಿಕಿತ್ಸೆ ಒಳಪಡಿಸಲಾಯಿತು.
ಸದ್ಯ ಅವರ ಆರೋಗ್ಯ ಗಂಭೀರ ಹಂತ ತಲುಪುತ್ತಿದ್ದು, ಕೋಮಾ ಹಂತ ತಲುಪಿದ್ದಾರೆ ಎಂದು ಆಸ್ಪತ್ರೆಯ ಉನ್ನತ ವೈದ್ಯರು ತಿಳಿಸಿದ್ದಾರೆ