ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಪ್ರಧಾನಿ ದೇವೇಗೌಡ
ಹೊಸದಿಲ್ಲಿ, ಸೆಪ್ಟೆಂಬರ್20: ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಇಂದು ಬೆಳಗ್ಗೆ ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಜೂನ್ 12 ರಂದು ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ಎಚ್.ಡಿ. ದೇವೇಗೌಡ ಅವರು ಅವಿರೋಧವಾಗಿ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಜುಲೈ 22ರಂದು ರಾಜ್ಯಸಭೆ ನೂತನ ಸದಸ್ಯರಿಗೆ ಪ್ರಮಾಣ ವಚನ ಕಾರ್ಯಕ್ರಮ ನಡೆದಿತ್ತು. ಆದರೆ, ಅನಾರೋಗ್ಯ ಮತ್ತು ಕೊರೋನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ 87 ವರ್ಷದ ದೇವೇಗೌಡರು ನವದೆಹಲಿಗೆ ಪ್ರಯಾಣಿಸಲು ಆಗಿರಲಿಲ್ಲ.
ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ರಾಜ್ಯಸಭೆ ಸದಸ್ಯರಾಗಿ ಇಂದು ಬೆಳಗ್ಗೆ ಪ್ರಮಾಣ ವಚನ ಸ್ವೀಕಾರhttps://t.co/O2VXUhWhkd
— Saaksha TV (@SaakshaTv) September 20, 2020
ಜೆಡಿಎಸ್ ಪಕ್ಷದ ಮುಖಂಡರು 1996 ರ ನಂತರ ಮೇಲ್ಮನೆಯ ಸದಸ್ಯರಾಗುವುದು ಇದೇ ಮೊದಲು. ದೇವೇಗೌಡರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಕೊರೋನಾ ಪ್ರಕರಣಗಳ ಏರಿಕೆಯ ಹಿನ್ನೆಲೆಯಲ್ಲಿ ಸಂಸತ್ತು ಅಧಿವೇಶನ ಸದ್ಯದಲ್ಲೇ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ.