ದೆಹಲಿ : ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಅವರನ್ನು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿಂಗ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಮನಮೋಹನ್ ಸಿಂಗ್ ಅವರಿಗೆ ನೀಡಿದ್ದ ಔಷಧಿಯ ಪ್ರಭಾವದಿಂದಾಗಿ ಜ್ವರ ಹೆಚ್ಚಾಗಿತ್ತು. ಸದ್ಯ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಅವರ ಕಚೇರಿಯ ಮೂಲಗಳು ಮಾಹಿತಿ ನೀಡಿದೆ.
ಇನ್ನು ಮನಮೋಹನ್ ಸಿಂಗ್ ಅವರ ಅನಾರೋಗ್ಯದ ಬಗ್ಗೆ ಹಲವು ಗಣ್ಯರು ಪ್ರತಿಕ್ರಿಯಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ಮನಮೋಹನ್ ಅವರು ಶೀಘ್ರ ಗುಣಮುಖರಾಗಲಿ ಎಂದು ಆಶಿಸಿದ್ದಾರೆ.








