Former Prime Minister Indira Gandhi
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜಯಂತಿ: ‘ಉಕ್ಕಿನ ಮಹಿಳೆ’ ನೆನೆದ ಗಣ್ಯರು
ನವದೆಹಲಿ: ಇಂದು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿಯವರ 103ನೇ ಜಯಂತಿ . ಈ ಹಿನ್ನೆಲೆ, ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ರಾಜಕೀಯ ಮುಖಂಡರು ಸಾಮಾಜಿಕ ಜಾಲತಾಣಗಳಲ್ಲಿ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರನ್ನು ಸ್ಮರಿಸಿದ್ದಾರೆ.
ಇಂದಿರಾಗಾಂಧಿ ಅವರ ಮೊಮ್ಮಗ ಆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೆಹಲಿಯಲ್ಲಿ ಇಂದಿರಾ ಗಾಂಧಿ ಸ್ಮಾರಕಕ್ಕೆ ತೆರಳಿ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಿದ್ರು. ಈ ವೇಳೆ ಹಲವು ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಅವರಿಗೆ ಸಾಥ್ ನೀಡಿದ್ದರು.
ಈ ಕುರಿತು ಕಾಂಗ್ರೆಸ್ ಅಧಿಕೃತ ಟ್ವಿಟ್ಟರ್ ನಲ್ಲೂ ಪೋಸ್ಟ್ ಮಾಡಲಾಗಿದೆ. ‘ ನಾಯಕತ್ವ, ದೂರದೃಷ್ಟಿ, ನಿಜವಾದ ನಾಯಕತ್ವ ಮತ್ತು ನಮ್ಮ ತಾಯಿನಾಡಿನ ಮಗಳಾದ ಇಂದಿರಾ ಗಾಂಧಿ ನಮ್ಮ ದೇಶದ ನಾಗರಿಕರಿಗೆ ಪ್ರಧಾನ ಮಂತ್ರಿಗಿಂತ ಹೆಚ್ಚಿನವರಾಗಿದ್ದರು, ಶ್ರೇಷ್ಠತೆ ಮತ್ತು ಸಮೃದ್ಧಿಯ ಅನ್ವೇಷಣೆಯಲ್ಲಿ ಪುನರುಜ್ಜೀವನಗೊಳಿಸುವ ಶಕ್ತಿಯಾಗಿದ್ದರು’ ಎಂದು ಟ್ವೀಟ್ ಮಾಡಿದೆ.
Former Prime Minister Indira Gandhi
ಇನ್ಮುಂದೆ ‘ಮಾಸ್ಕ್ ಧರಿಸದೇ’ ಓಡಾಡೋ ಮುನ್ನ ಎಚ್ಚರ.. ಎಚ್ಚರ..! ‘2 ಸಾವಿರ ರೂ’ ದಂಡ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








