ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) (Manmohan Singh) ಗುರುವಾರ ರಾತ್ರಿ ಇಹಲೋಕ ತ್ಯಜಿಸಿದ್ದು, ಶನಿವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲದೇ, ಅಧಿಕೃತ ಮಾಹಿತಿಯನ್ನು ಇಂದು ತಿಳಿಸಲಾಗುವುದು ಎಂದು ಹೇಳಿದ್ದಾರೆ.
ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಡಿಸೆಂಬರ್ 28 ರಂದು ನಡೆಯಲಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನ ಸೇರಿದಂತೆ ಏಳು ದಿನಗಳ ಕಾಲ ಕಾಂಗ್ರೆಸ್ ನ ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎದಿದ್ದಾರೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್‌ನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಡಾ ಸಿಂಗ್ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ








