ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ (Atal Bihari Vajpayee Birthday) ಅವರ 99ನೇ ಜನ್ಮದಿನ ಸ್ಮರಣೆ ನಡೆದಿದ್ದು, ಈ ಸಂದರ್ಭದಲ್ಲಿ ಅಜಾತಶತೃವನ್ನು ಪ್ರಧಾನಿ ಮೋದಿ ನೆನಪು ಮಾಡಿಕೊಂಡಿದ್ದಾರೆ.
ಈ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ‘ಸದೈವ್ ಅಟಲ್’ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದ್ದಾರೆ. ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ರಾಜ್ಯಸಭಾ ಉಪ ಸಭಾಪತಿ ಹರಿವಂಶ್ ಮುಂತಾದ ನಾಯಕರು ಈ ಸಂದರ್ಭದಲ್ಲಿ ಪುಷ್ಪ ನಮನ ಸಲ್ಲಿಸಿ ಗೌರವ ಸಲ್ಲಿಸಿದರು.
ಅಟಲ್ ಬಿಹಾರಿ ವಾಜಪೇಯಿ ಅವರ 99 ನೇ ಜನ್ಮದಿನದಂದು ಉತ್ತಮ ಆಡಳಿತ ದಿನ ಆಚರಿಸಲು ಕೇಂದ್ರ ನಿರ್ಧಾರ ಮಾಡಿದೆ. ಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ದೇಶಾದ್ಯಂತ ಪಕ್ಷದ ಪದಾಧಿಕಾರಿಗಳು ಮತ್ತು ರಾಜ್ಯಾಧ್ಯಕ್ಷರುಗಳು ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರಕ್ಕೆ ಎಲ್ಲಾ ಬೂತ್‌ಗಳಲ್ಲಿ ಪುಷ್ಪ ನಮನ ಸಲ್ಲಿಸಬೇಕು ಮತ್ತು ಮಾಜಿ ಪ್ರಧಾನಿ ಅವರ ಅದ್ಭುತ ವ್ಯಕ್ತಿತ್ವ ಮತ್ತು ಕಾರ್ಯಗಳ ಕುರಿತು ಚರ್ಚಿಸಬೇಕು ಎಂದು ಹೇಳಿದ್ದಾರೆ.