ಇಸ್ಲಾಮಾಬಾದ್: ಇಸ್ಲಾಮೇತರ ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕ್ ನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಪತ್ನಿ ಬುಶ್ರಾ ಬೀಬಿ ಅವರಿಗೆ ಪಾಕ್ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ.
ಬುಶ್ರಾ ಬೀಬಿ ತಮ್ಮ ಪತಿ ಮೇನಕಾ ಖವಾರ್ ಅವರಿಗೆ ವಿಚ್ಛೇದನ ನೀಡಿದ ನಂತರ ಇಮ್ರಾನ್ ಖಾನ್ ಅವರನ್ನು ಮದುವೆಯಾಗುವ ಎರಡು ವಿವಾಹಗಳ ನಡುವಿನ ಕಡ್ಡಾಯ ವಿರಾಮ ಅಥವಾ ಇದ್ದತ್ ಆಚರಿಸುವ ಇಸ್ಲಾಮಿಕ್ ಪದ್ಧತಿ ಉಲ್ಲಂಘಿಸಿದ್ದಾರೆ ಎಂಬ ಆರೋಪ ದಾಖಲಾಗಿತ್ತು.
ಪ್ರಕರಣದ ಕುರಿತು ಅಡಿಯಾಲಾ ಜೈಲಿನಲ್ಲಿ 14 ಗಂಟೆಗಳ ಕಾಲ ನಡೆದ ವಿಚಾರಣೆ ನಂತರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಈಗಾಗಲೇ ಇಮ್ರಾನ್ ಖಾನ್ ರಾವಲ್ಪಿಂಡಿಯ ಗ್ಯಾರಿಸನ್ ಸಿಟಿಯಲ್ಲಿ ಜೈಲಿನಲ್ಲಿದ್ದಾರೆ. ಪತ್ನಿ ಇಸ್ಲಾಮಾಬಾದ್‌ನಲ್ಲಿರುವ ಅವರ ಬೆಟ್ಟದ ಮ್ಯಾನ್ಷನ್‌ನಲ್ಲಿ ಶಿಕ್ಷೆ ಅನುಭವಿಸಲು ಅನುಮತಿಸಲಾಗಿದೆ.








