ನವದೆಹಲಿ : ಇಂದು ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 75ನೇ ಜಯಂತಿ. ಈ ಹಿನ್ನೆಲೆ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ತಂದೆಯ ಬಗ್ಗೆ ಟ್ವಿಟ್ಟರ್ ನಲ್ಲಿ ಭಾವನಾತ್ಮಕವಾಗಿ ಕೆಲ ಸಾಲುಗಳನ್ನು ಬರೆದುಕೊಂಡಿದ್ದಾರೆ.
ರಾಹುಲ್ ಗಾಂಧಿ ಟ್ವೀಟ್ ನಲ್ಲಿ, “ರಾಜೀವ್ ಗಾಂಧಿ ಅವರು ಓರ್ವ ದೂರ ದೃಷ್ಟಿಯುಳ್ಳ ನಾಯಕಾರಗಿದ್ದರು. ಭವಿಷ್ಯದ ದೃಷ್ಟಿಕೋನದಲ್ಲಿ ಕೆಲಸ ಮಾಡುವ ವ್ಯಕ್ತಿಯಾಗಿದ್ದರು. ಇದೆಲ್ಲಕ್ಕಿಂತ ಮಿಗಿಲಾಗಿ ಉದಾರ ಮತ್ತು ಪ್ರೀತಿಯ ಸ್ನೇಹ ಜೀವಿಯಾಗಿದ್ದರು. ಅವರನ್ನ ತಂದೆಯಾಗಿ ಪಡೆದ ನಾನಯ ಅದೃಷ್ಟವಂತ ಹಾಗೂ ಹೆಮ್ಮೆ ಪಡುತ್ತೇನೆ. ಪ್ರತಿದಿನ ತಂದೆಯನ್ನು ನಾವು ಮಿಸ್ ಮಾಡಿಕೊಳ್ಳುತ್ತೇವೆ ಎಂದು ಬರೆದುಕೊಂಡಿದ್ದಾರೆ.