ADVERTISEMENT
Saturday, March 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಾಜಿ ರಣಜಿ ಕ್ರಿಕೆಟಿಗನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

admin by admin
June 10, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಮಾಜಿ ರಣಜಿ ಕ್ರಿಕೆಟಿಗನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Related posts

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

March 14, 2026
ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

March 14, 2026

ತಿರುವನಂತಪುರ, ಜೂನ್ 10: ಕೇರಳದ ಮಾಜಿ ರಣಜಿ ಕ್ರಿಕೆಟಿಗ ಜಯಮೋಹನ್ ಥಾಂಪಿ ಅವರ ಮೃತಶರೀರವು ತಿರುವನಂತಪುರಂನಲ್ಲಿರುವ ಅವರ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ‌ ಜಯಮೋಹನ್ ಥಂಪಿ ಸಾವಿಗೆ ಸಂಬಂಧಿಸಿದಂತೆ ಅವರ ಮಗ ಅಶ್ವಿನ್ ಅವರನ್ನು ಕೊಲೆ ಮಾಡಿರುವ ಅನುಮಾನದಡಿಯಲ್ಲಿ ಬಂಧಿಸಲಾಗಿದೆ.
64 ವರ್ಷ ಪ್ರಾಯದ ಜಯಮೋಹನ್​ ಥಾಪಿ ಅವರು ತ್ರವನ್ಕೋರ್ನಲ್ಲಿ ಬ್ಯಾಂಕ್‌ ಉದ್ಯೋಗಿಯಾಗಿ ಸೇವೆ ಸಲ್ಲಿಸಿದ್ದರು. ಇವರು ಪ್ರಥಮ ದರ್ಜೆ ಕ್ರಿಕೆಟಿನಲ್ಲಿ ಕೇರಳ ತಂಡವನ್ನು ಆರು ಬಾರಿ ಪ್ರತಿನಿಧಿಸಿದ್ದರು ಮತ್ತು ತಂಡದಲ್ಲಿ ವಿಕೆಟ್ ಕೀಪರ್ -ಬ್ಯಾಟ್ಸ್ ಮ್ಯಾನ್ ಆಗಿ ಗುರುತಿಸಿಕೊಂಡಿದ್ದರು. 1979 ಮತ್ತು 1982ರ ನಡುವೆ ಬಲಗೈ ವಿಕೆಟ್ ಕೀಪರ್ ಕಮ್ ಬ್ಯಾಟ್ಸ್ ಮ್ಯಾನ್ ಆಗಿದ್ದ ಜಯಮೋಹನ್ ಅವರು ಕೇರಳ ತಂಡದ ಪರವಾಗಿ ಆಟವಾಡಿದ್ದರು.‌ ಇದರ ಮೊದಲು ಮೂರು ವರ್ಷಗಳ ಕಾಲ ಕೇರಳ ಅಂಡರ್-22 ತಂಡದ ಪರವಾಗಿಯೂ ಆಡಿದ್ದರು ‌ಎಂದು ಕೇರಳ ಕ್ರಿಕೆಟ್​ ಸಂಸ್ಥೆ ಹೇಳಿದೆ.


ಜಯಮೋಹನ್ ಅವರ ಪತ್ನಿ ಅನಿತಾ ಎರಡು ವರ್ಷಗಳ ಹಿಂದೆ ತೀರಿಕೊಂಡಿದ್ದು, ಅವರ ಸಾವಿನ ನಂತರ ಜಯಮೋಹನ್ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ. ಕೇರಳದ ಮನಕಾಡ್ ನಲ್ಲಿ ಮಗನ ಜತೆ ಜಯಮೋಹನ್ ಅವರು ವಾಸಿಸುತ್ತಿದ್ದು, ಮನೆಯಲ್ಲಿಯೇ ಅವರು ಅನುಮಾನಾಸ್ಪದವಾಗಿ ಸಾವಿಗೀಡಾದ ಹಿನ್ನಲೆಯಲ್ಲಿ ಮಗ ಅಶ್ವಿನ್​ನನ್ನು ಪೊಲೀಸರು ಬಂಧಿಸಿದ್ದಾರೆ. ‌ಜಯಮೋಹನ್​ ಅವರ ಮಗ ಅಶ್ವಿನ್ ಕೇರಳದಲ್ಲಿ ಬಾಣಸಿಗನಾಗಿ ಕೆಲಸ ಮಾಡುತ್ತಿದ್ದು, ಮನೆಯಲ್ಲಿ ಶವವಿದ್ದರೂ ಯಾರಿಗೂ ‌ಮಾಹಿತಿ‌ ನೀಡಿರಲಿಲ್ಲ.
ವಿಚಾರಣೆ ವೇಳೆ ತಾನೇ ಕೊಲೆ ಮಾಡಿರುವುದಾಗಿ ಅವರ ಮಗ ಅಶ್ವಿನ್ ಒಪ್ಪಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದ್ದು ಕೊಲೆಗೆ ಕಾರಣ ‌ತಿಳಿದುಬಂದಿಲ್ಲ. ತನಿಖೆಯನ್ನು ಮುಂದುವರಿಸಿರುವ ಪೊಲೀಸರು ಕೊಲೆ ಮಾಡಲು‌ ಅಶ್ವಿನ್ ಗೆ ಸಹಕರಿಸಿದ ಹಿನ್ನೆಲೆಯಲ್ಲಿ ನೆರೆಹೊರೆಯವರನ್ನೂ ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಜಯಮೋಹನ್​ ಅವರ ಹಣೆಯಲ್ಲಿ ಬಲವಾದ ಪೆಟ್ಟಿನಿಂದ ರಕ್ತಸ್ರಾವವಾಗಿರುವ ಗುರುತು ಇರುವ ಹಿನ್ನೆಲೆಯಲ್ಲಿ ಮಗ ಅವರನ್ನು ಬಲವಂತವಾಗಿ ದೂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ

Tags: Cricketkeralaranjicricketಕೇರಳರಣಜಿ
ShareTweetSendShare
Join us on:

Related Posts

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

by Shwetha
March 14, 2026
0

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

by Shwetha
March 14, 2026
0

ದೇಶಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ಹೋಟೆಲ್‌ಗಳು ಗ್ರಾಹಕರಿಗೆ ಹೆಚ್ಚುವರಿ ಶುಲ್ಕ ವಿಧಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಯುದ್ಧದ ಪರಿಣಾಮವಾಗಿ ಸಿಲಿಂಡರ್‌ಗಳ...

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

by Shwetha
March 14, 2026
0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಯುದ್ಧ ಹಾಗೂ ಇರಾನ್ ದೇಶವು ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಈ...

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

by Shwetha
March 14, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಅಧಿಕೃತ ಚಾಲನೆ ನೀಡಲು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಅತಿ...

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

by Shwetha
March 14, 2026
0

ರಾಜ್ಯ ಬಜೆಟ್ ಕುರಿತು ಅಸಮಾಧಾನ ವ್ಯಕ್ತಪಡಿಸಿ ಸ್ವಪಕ್ಷೀಯ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ತಮ್ಮ ಹೇಳಿಕೆಗೆ ಅಂಟಿಕೊಂಡಿದ್ದಾರೆ. ಪಕ್ಷದೊಳಗಿನ ಟೀಕೆಗಳಿಗೆ ಕಿವಿಗೊಡದ ಅವರು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram