ಮಾಜಿ ರೌಡಿಶೀಟರ್ ಒಬ್ಬಾತನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ.
ಈ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹತ್ತಿರ ನಡೆದಿದೆ. ಸುರೇಶ ಅಲಿಯಾಸ್ ಕ್ಯಾಪ್ಟನ್ ಕೊಲೆಯಾದ ಮಾಜಿ ರೌಡಿಶೀಟರ್ ಎನ್ನಲಾಗಿದೆ. ಕೊಲೆಯಾಗಿರುವ ವ್ಯಕ್ತಿ ಬೆಂಗಳೂರಿನ ಹನುಮಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್ ಆಗಿದ್ದ. ಸುರೇಶನನ್ನು ಹುಲಿಯೂರುದುರ್ಗ ಹತ್ತಿರ ತೆರಳುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸುರೇಶ ಕಳೆದ ನಾಲ್ಕೈದು ತಿಂಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದರು.