ನವದೆಹಲಿ: ಮಾಜಿ ಸಂಸದ ಸಿ.ಎಚ್. ವಿಜಯ್ ಶಂಕರ್ ( CH Vijay Shankar) ಮೇಘಾಲಯ(Meghalaya) ದ ರಾಜ್ಯಪಾಲರನ್ನಾಗಿ ನೇಮಕ ಮಾಡಿ ರಾಷ್ಟ್ರಪತಿ ದ್ರೌಪತಿ ಮುರ್ಮು(Draupadi Murmu) ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಮೈಸೂರು-ಕೊಡಗು (Mysuru-Kodagu) ಕ್ಷೇತ್ರದ ಮಾಜಿ ಸಂಸದರಾಗಿದ್ದ ಸಿ.ಎಚ್. ವಿಜಯ್ ಶಂಕರ್ ಈ ಬಾರಿಯೂ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಒಡೆಯರ್ ಗೆ ಟಿಕೆಟ್ ನೀಡಲಾಗಿತ್ತು. ಈಗ ಅವರನ್ನು ರಾಜ್ಯಪಾಲರನ್ನಾಗಿ ರಾಷ್ಟ್ರಪತಿ ನೇಮಕ ಮಾಡಿದ್ದಾರೆ. ವಿಜಯ್ ಶಂಕರ್ ಅವರು 1998, 2004 ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು. ನಂತರ 2019ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿ ಪ್ರತಾಪ್ ಸಿಂಹ ವಿರುದ್ಧ ಸೋಲು ಕಂಡಿದ್ದರು. ಆನಂತರ ಮರಳಿ ಬಿಜೆಪಿ ಸೇರಿದ್ದರು.
ಇವರೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 3 ರಾಜ್ಯಪಾಲರನ್ನು (Governors) ವರ್ಗಾವಣೆ ಮಾಡಿ 2 ರಾಜ್ಯಪಾಲರಿಗೆ ಹೆಚ್ಚುವರಿ ಹೊಣೆ ನೀಡಿದ್ದಾರೆ. ಪ್ರಧಾನಿ (PM Narendra Modi) ಅವರ ಆಪ್ತರಾಗಿದ್ದ ಗುಜರಾತ್ ನ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ಕೈಲಾಸನಾಥನ್ ಅವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿದೆ. ತ್ರಿಪುರಾ ಮಾಜಿ ಸಿಎಂ ಜಿಷ್ಣು ದೇವ್ ವರ್ಮಾರನ್ನು ತೆಲಂಗಾಣದ ರಾಜ್ಯಪಾಲರನ್ನಾಗಿ ನೇಮಿಸಲಾಗಿದ್ದು, ರಮೆನ್ ದೇಕಾ ಛತ್ತೀಸಗಢಕ್ಕೆ ನೇಮಕವಾಗಿದ್ದಾರೆ.
ಹರಿಭಾವು ಬಾಗಡೆಗೆ ರಾಜಸ್ಥಾನ, ಗಂಗ್ವಾರ್ ಗೆ ಜಾರ್ಖಂಡ್, ಮಾಥುರ್ ಗೆ ಸಿಕ್ಕಿಂಗೆ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಪಂಜಾಬ್ ನ ಆಪ್ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದ ಬನ್ವಾರಿಲಾಲ್ ಪುರೋಹಿತ್ ಅವರ ಸ್ಥಾನಕ್ಕೆ ಅಸ್ಸಾಂನ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾರನ್ನು ನೇಮಿಸಲಾಗಿದೆ.
ಸಿಕ್ಕಿಂ ಗವರ್ನರ್ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಅಸ್ಸಾಂನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಜತೆಗೆ ಮಣಿಪುರ ಜವಾಬ್ದಾರಿ ನೀಡಲಾಗಿದೆ. ಜಾರ್ಖಂಡ್ ಗವರ್ನರ್ ಸಿ.ಪಿ. ರಾಧಾಕೃಷ್ಣನ್ ಅವರನ್ನು ಮಹಾರಾಷ್ಟ್ರಕ್ಕೆ ವರ್ಗಾವಣೆ ಮಾಡಲಾಗಿದೆ.







