Cyrus Mistry | ಟಾಟಾ ಸನ್ಸ್ ಮಾಜಿ ಮುಖ್ಯಸ್ಥ ಸೈರಸ್ ಮಿಸ್ತ್ರಿ ನಿಧನ
ಟಾಟಾ ಸನ್ಸ್ ಗ್ರೂಪ್ ಮಾಜಿ ಅಧ್ಯಕ್ಷ ಉದ್ಯಮಿ ಸೈರಸ್ ಮಿಸ್ತ್ರಿ (54) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ತಮ್ಮ ಮರ್ಸಿಡಿಸ್ ಕಾರಿನಲ್ಲಿ ಅಹಮದಾಬಾದ್‌ನಿಂದ ಮುಂಬೈಗೆ ಹಿಂದಿರುಗುತ್ತಿದ್ದಾಗ ಭಾನುವಾರ ಪಾಲ್ಘರ್‌ನ ಚರೋತಿ ಬಳಿ ಸಂಭವಿಸಿದ ಅಫಘಾತದಲ್ಲಿ ನಿಧನರಾಗಿದ್ದಾರೆ.

ಮಧ್ಯಾಹ್ನ 3.15 ರ ಸುಮಾರಿಗೆ ಕಳಸ ಪೊಲೀಸ್ ಠಾಣಾ ವ್ಯಾಪ್ತಿಯ ಸೂರ್ಯ ನದಿ ಸೇತುವೆಯ ಮೇಲೆ ಚರೋಟಿ ನಾಕಾದಲ್ಲಿ ಅಪಘಾತ ಸಂಭವಿಸಿದೆ ಎಂದು ಕಳಸ ಪೊಲೀಸ್ ಠಾಣಾಧಿಕಾರಿ ತಿಳಿಸಿದ್ದಾರೆ.
ದುರ್ಘಟನೆಯಲ್ಲಿ ಗಾಯಗೊಂಡ ಮತ್ತಿಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪಾಲ್ಘರ್ ಜಿಲ್ಲಾ ವರಿಷ್ಠಾಧಿಕಾರಿ ಬಾಳಾಸಾಹೇಬ್ ಪಾಟೀಲ್ ಸುದ್ದಿಯನ್ನ ಖಚಿತಪಡಿಸಿದ್ದಾರೆ. ಎಸ್ ಪಿ ಪ್ರಕಾರ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.