ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ ನಿಧನ

1 min read
Babagouda Patil

ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ ನಿಧನ

ಬೆಳಗಾವಿ : ಹೆಮ್ಮಾರಿ ಕೊರೊನಾ ವೈರಸ್ ಸೋಂಕಿಗೆ ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ (78) ಬಲಿಯಾಗಿದ್ದಾರೆ.

ವಾರದ ಹಿಂದೆ ಬಾಬಾಗೌಡ ಪಾಟೀಲ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಪಾಟೀಲರು ವಿಧಿವಶರಾಗಿದ್ದಾರೆ.

Babagouda Patil

1989 ರಲ್ಲಿ ಬೆಳಗಾವಿ ಗ್ರಾಮೀಣ, ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಎರಡೂ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ರೈತ ಸಂಘದ ಅಭ್ಯರ್ಥಿ ಆಗಿ ವಿಧಾನಸಭೆ ಪ್ರವೇಶಿಸಿದ್ದ ಬಾಬಾಗೌಡ, 1998ರಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಿ ಗೆಲುವು ಕಂಡಿದ್ದರು.

ಕೇಂದ್ರ ಗ್ರಾಮೀಣ ಅಭಿವೃದ್ಧಿ ಇಲಾಖೆಯ ಸಚಿವರಾಗಿದ್ದರು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd