ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಆಗಿ ಮಾಜಿ ಕೇಂದ್ರ ಸಚಿವ ಮನೋಜ್ ಸಿನ್ಹಾ ನೇಮಕ
ಶ್ರೀನಗರ, ಅಗಸ್ಟ್ 6: ಜಿ.ಸಿ.ಮರ್ಮು ಹಠಾತ್ತನೆ ರಾಜೀನಾಮೆ ನೀಡಿದ ಒಂದು ದಿನದ ನಂತರ ಮಾಜಿ ಕೇಂದ್ರ ಸಚಿವ ಮನೋಜ್ ಸಿನ್ಹಾ ಅವರನ್ನು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಲಾಗಿದೆ. ಲೆಫ್ಟಿನೆಂಟ್ ಗವರ್ನರ್ ಜಿ.ಸಿ.ಮರ್ಮು ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂದು ಗುರುವಾರ ಬೆಳಿಗ್ಗೆ ರಾಷ್ಟ್ರಪತಿ ಭವನ ತಿಳಿಸಿದೆ.
ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ 370ನೇ ವಿಧಿಯ ವಿಶೇಷ ಸ್ಥಾನಮಾನ ರದ್ದುಗೊಳಿಸಿ ಒಂದು ವರ್ಷ ಪೂರ್ಣಗೊಂಡ ದಿನವೇ ಮುರ್ಮು ರಾಜೀನಾಮೆ ಸಲ್ಲಿಸಿದ್ದಾರೆ.
ಮುಮ್ಮು ಬುಧವಾರ ರಾತ್ರಿ ರಾಜೀನಾಮೆ ನೀಡಿದ್ದು, ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ 370ನೇ ವಿಧಿಯ ವಿಶೇಷ ಸ್ಥಾನಮಾನ ರದ್ದುಗೊಳಿಸಿ ಒಂದು ವರ್ಷ ಪೂರ್ಣಗೊಂಡಿತ್ತು.
ಹೊಸ ಪಾತ್ರವು ದೊಡ್ಡ ಜವಾಬ್ದಾರಿಯುತವಾಗಿದೆ ಮತ್ತು ಇಂದು ಕಾಶ್ಮೀರಕ್ಕೆ ಹೋಗಲಿದ್ದೇನೆ ಎಂದು ಮನೋಜ್ ಸಿನ್ಹಾ ಹೇಳಿದ್ದಾರೆ.
ಕೇಂದ್ರದ ಪ್ರತಿನಿಧಿಯಾಗಿ ಶ್ರೀನಗರದಲ್ಲಿ ವೃತ್ತಿ ಅಧಿಕಾರಿಗಳ ಬದಲು ರಾಜಕೀಯ ನಾಯಕರ ನೇಮಕವು ರಾಜ್ಯದಲ್ಲಿ ರಾಜಕೀಯ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅನುಕೂಲಕರ ಪರಿಸ್ಥಿತಿಗಳನ್ನು ಸೃಷ್ಟಿಸಲು ಮುಂದಿನ ದಿನಗಳಲ್ಲಿ ನೆರವಾಗಲಿದೆ ಎಂದು ಪರಿಣತರ ಅಭಿಪ್ರಾಯ.