ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು Bill Clinton saaksha tv
ವಾಷಿಂಗ್ಟನ್ : ಅಮೆರಿಕಾದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಕ್ಯಾಲಿಫೋರ್ನಿಯಾದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
75 ವರ್ಷದ ಕ್ಲಿಂಟನ್ ರಕ್ತ ಸೋಂಕಿನಿಂದ ಬಳಲುತ್ತಿದ್ದು, ಕ್ಯಾಲಿಫೋರ್ನಿಯಾದ ಇರ್ವಿನ್ ಮೆಡಿಕಲ್ ಸೆಂಟರ್‍ನಲ್ಲಿ ಚಿಕಿತ್ಸೆ ಮುಂದುವರೆದಿದೆ.
ಸದ್ಯ ಕ್ಲಿಂಟನ್ ಅವರು ತೀವ್ರ ನಿಗಾ ಘಟಕದಲ್ಲಿಟ್ಟಿದ್ದು, ಪರ್ಸನಲ್ ಆಗಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತಂತೆ ಕ್ಲಿಂಟನ್ ವಕ್ತಾರ ಏಂಜೆಲ್ ಯುರೇನಾ ಟ್ವಿಟ್ಟರ್‍ನಲ್ಲಿ ಮಾಹಿತಿ ನೀಡಿದ್ದು, ಕ್ಲಿಂಟನ್ ಅವರ ಮನಸ್ಥಿತಿ ಉತ್ತಮವಾಗಿದೆ.
ಅವರಿಗೆ ಆರೈಕೆ ಅತ್ಯುತ್ತಮವಾಗಿ ಆರೈಕೆ ಮಾಡುತ್ತಿರುವ ವೈದ್ಯರು, ನರ್ಸ್ ಹಾಗೂ ಸಿಬ್ಬಂದಿಗೆ ಧನ್ಯವಾದ ತಿಳಿಸಿದ್ದಾರೆ.









