ನಮ್ಮ ಪ್ರತಿಭಟನೆ ವೇಳೆ ನಡೆದ ಗಲಭೆಗೂ ನಮಗೂ ಸಂಬಂಧವಿಲ್ಲ: ಭಾರತೀಯ ಕಿಸಾನ್ ಸಂಘ..!
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ. ತಿಂಗಳುಗಳಿಂದ ರೈತರು ಪ್ರತಿಭಟನೆ ನಡೆಸುತ್ತಲೇ ಇದ್ದು, ಇಂದು ಗಣರಾಜ್ಯೋತ್ಸವ ದಿನದಂದೇ ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರು ಟ್ರ್ಯಾಕ್ಟರ್ ರಾಲಿ ನಡೆಸಿದ್ದಾರೆ. ಆದ್ರೆ ರೈತರ ಹೆಸರಿನಲ್ಲಿ ಗಲಭೆ ನಡೆಸಿ, ನಮ್ಮ ಮುಖಕ್ಕೆ ಮಸಿ ಬಳಿಯಲು ಯತ್ನಿಸಿದ್ದು ಯಾರೆಂದು ತಿಳಿದಿದೆ ಎಂದು ಹೇಳುವ ಮೂಲಕ ಭಾರತೀಯ ಕಿಸಾನ್ ಒಕ್ಕೂಟದ ವಕ್ತಾರ ರಾಕೇಶ್ ಟಿಖಾಯತ್ ಅವರು ಅಚ್ಚರಿ ಮೂಡಿಸಿದ್ದಾರೆ.
ದಿಲ್ಲಿ ಟ್ರ್ಯಾಕ್ಟರ್ ದಂಗೆ : ಭುಗಿಲೆದ್ದ ರೈತರು, ರಣರಂಗವಾದ ರಾಜಧಾನಿ
ಹೌದು ನಮ್ಮ ಪ್ರತಿಭಟನೆ ವೇಳೆ ನಡೆದ ಟ್ರ್ಯಾಕ್ಟರ್ ಗಲಭೆಗೂ, ನಮಗೂ ಸಂಬಂಧ ಇಲ್ಲ. ನಮ್ಮ 41 ಸಂಘಟನೆಯ ಜನರು ಈ ಗಲಭೆಯಲ್ಲಿ ಶಾಮೀಲಾಗಿಲ್ಲ. ಈ ಕೃತ್ಯ ಎಸಗಿದವರು ರಾಜಕೀಯ ಪಕ್ಷದ ಕಾರ್ಯಕರ್ತರು. ಇದರ ಹಿಂದೆ ರಾಜಕೀಯ ಕೈವಾಡವಿದೆ ಎಂರು ರಾಕೇಶ್ ಗಂಭೀರವಾಗಿ ಆರೋಪಿಸಿದ್ದಾರೆ. ನಮ್ಮ ಹೋರಾಟದ ಹಕ್ಕನ್ನು ಕಿತ್ತುಕೊಳ್ಳಲು ರಾಜಕೀಯ ಪಕ್ಷಗಳು ಯತ್ನಿಸುತ್ತಿವೆ. ರೈತರ ಹೆಸರಿನಲ್ಲಿ ಗೂಂಡಾಗಿರಿ ನಡೆಸುವ ಮೂಲಕ ರೈತರ ಹೋರಾಟದ ದಿಕ್ಕುತಪ್ಪಿಸುವ ವ್ಯವಸ್ಥಿತ ಸಂಚು ನಡೆದಿದೆ ಎಂದು ರಾಕೇಶ್ ಆರೋಪಿಸಿ ಆಕ್ರೋಶ ಹೊರಹಾಕಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








