ಬೆಂಗಳೂರು: ಮಗುವೊಂದು ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ.
ಈ ಭಯಾನಕ ಘಟನೆ ನಗರದಲ್ಲಿ ನಡೆದಿದ್ದು, ಅಪಾರ್ಟ್ಮೆಂಟ್ವೊಂದರಲ್ಲಿ (Apartment) ಆಟವಾಡುತ್ತಿದ್ದ ಸಂದರ್ಭದಲ್ಲಿ ಮಗುವಿನ ಮೇಲೆ ಕಾರು ಹತ್ತಿದೆ. ಸದ್ಯ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಕಳೆದ 10 ದಿನಗಳ ಹಿಂದೆಯೇ ನಡಿದೆ.
ಜೋಗ್ ಜುತಾರ್, ಅನಿತಾ ಎಂಬ ದಂಪತಿಯ ಮಗು ಅರ್ಬಿನಾ ಎಂಬ ಮಗುವಿನ ಮೇಲೆಯೇ ಕಾರು ಹಾದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನೋಡುಗರ ಎದೆ ಝಲ್ ಎನಿಸುವಂತಿದೆ. ಅರಿವಿಗೆ ಬಾರದೇ ಕಟ್ಟಡದ ಮೇಲಿಂದ ಮಗು ಬಿದ್ದಿರುವುದಾಗಿ ಪೋಷಕರು ದೂರು ಕೊಟ್ಟಿದ್ದರು. ಆದರೆ, ಮಗುವಿನ ದೇಹದಲ್ಲಿ ರಕ್ತಸ್ರಾವ ಆಗುತ್ತಿರುವುದನ್ನು ಕಂಡು ಪೊಲೀಸರು ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಈ ಕರಿತು ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.