ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆಸಿದ ದಾರುಣ ಘಟನೆ ನಡೆದಿದ್ದು, ಇದು ವ್ಯಾಪಕ ಆಕ್ರೋಶ ಮತ್ತು ಚರ್ಚೆಗೆ ಕಾರಣವಾಗಿದೆ. ಕಾನೂನು ಪದವಿ ಓದುತ್ತಿದ್ದ ಯುವತಿ ಮೇಲೆ ಅತ್ಯಾಚಾರ ನಡೆಸಿ, ಆರೋಪಿಗಳು ಘಟನೆಯನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿ, ಯುವತಿಗೆ ಹಲವಾರು ಬಾರಿ ಬೆದರಿಕೆ ಹಾಕಿದ್ದರು.
ಕಿರುಕುಳ ಮತ್ತು ಹಿಂಸೆ ತಾಳಲಾರದೆ ಯುವತಿ ಆತ್ಮಹತ್ಯೆ ಮಾಡಲು ಯತ್ನಿಸಿದ್ದು, ಆದರೆ ತಂದೆಯು ಆಕೆಯನ್ನು ರಕ್ಷಿಸಿದ್ದಾರೆ ಎಂದು ಹೇಳಲಾಗಿದೆ. ಈ ಘಟನೆಯ ನಂತರ, ಪೊಲೀಸರಿಗೆ ದೂರು ನೀಡಲಾಗಿದ್ದು, ಪ್ರಕರಣದ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಅರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲು ಪೋಲಿಸರು ಮುಂದಾಗಿದ್ದು, ವಿವಿಧ ಹಂತಗಳಲ್ಲಿ ತನಿಖೆಯು ನಡೆಯುತ್ತಿದೆ.