ಚಂಡೀಗಢ: ಇಟ್ಟಿಗೆ ಗೂಡು ಕುಸಿದ ಪರಿಣಾಮ ನಾಲ್ವರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಹರಿಯಾಣದ (Haryana) ಹಿಸ್ಸಾರ್‌ನ ಬುಡಾನಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಎಲ್ಲರೂ ಮಲಗಿದ್ದ ಸಂದರ್ಭದಲ್ಲಿ ಇಟ್ಟಿಗೆ ಗೂಡು (Brick Kiln) ಕುಸಿದಿದೆ. ಪರಿಣಾಮ ನಾಲ್ವರು ಸಾವನ್ನಪ್ಪಿ, ಓರ್ವ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ.
ಮಕ್ಕಳು ಮತ್ತು ಕೆಲವು ಕಾರ್ಮಿಕರು ಇಟ್ಟಿಗೆ ಭಟ್ಟಿಯ ಗೋಡೆಯ ಹತ್ತಿರ ಮಲಗಿದ್ದಾಗ, ಏಕಾಏಕಿಯಾಗಿ ಅದು ಕುಸಿದಿದೆ. ಪರಿಣಾಮ ಸೂರಜ್, ನಂದಿನಿ ಮತ್ತು ವಿವೇಕ್ ಸ್ಥಳದಲ್ಲೇ ಸಾವನ್ನಪ್ಪಿದರೆ, ನಿಶಾ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾಳೆ.
ಗೌರಿ (5) ಎಂಬ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ. ಸಾವನ್ನಪ್ಪಿದ ಮಕ್ಕಳು ಉತ್ತರ ಪ್ರದೇಶ ಮೂಲದವರು ಎನ್ನಲಾಗಿದೆ.








